ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 24 JULY 2023
SHIMOGA : ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ತುಂಗಾ ಜಲಾಶಯದ ಒಳ ಹರಿವು ಏರಿಕೆಯಾಗುತ್ತಿದೆ. ಮಧ್ಯಾಹ್ನದ ವೇಳೆಗೆ ಜಲಾಶಯದಿಂದ ಭಾರಿ ಪ್ರಮಾಣದ ನೀರನ್ನ ಹೊಳೆಗೆ ಹರಿಸಲಾಗುತ್ತಿದೆ. (Mantapa Drowned)
ಮಧ್ಯಾಹ್ನದ ಹೊತ್ತಿಗೆ ತುಂಗಾ ಜಲಾಶಯದಿಂದ 67 ಸಾವಿರ ಕ್ಯೂಸೆಕ್ ನೀರನ್ನು ಹೊಳೆಗೆ ಹರಿಸಲಾಗುತ್ತಿತ್ತು. ಇದರಿಂದ ಶಿವಮೊಗ್ಗದಲ್ಲಿ ತುಂಗಾ ನದಿ ನೀರಿನ ಮಟ್ಟ ಏರಿಕೆಯಾಗಿದೆ.
View this post on Instagram
ಮುಳುಗಿದ ಮಂಟಪ
ತುಂಗಾ ನದಿ ನೀರಿನ ಮಟ್ಟ ಏರಿಕೆಯಾಗಿದ್ದರಿಂದ ಕೋರ್ಪಲಯ್ಯ ಛತ್ರ ಮಂಟಪ ಮುಳುಗಡೆಯಾಗಿದೆ. ಬೆಳಗ್ಗೆ ಮಂಟಪ ಮುಳುಗಿದ (Mantapa Drowned) ವಿಚಾರ ತಿಳಿಯುತ್ತಿದ್ದಂತೆ ಜನರು ಸೇತುವೆ ಮೇಲೆ ನಿಂತು ಮಂಟಪ ಮುಳುಗಿರುವುದನ್ನು ಕಣ್ತುಂಬಿಕೊಂಡರು. ಮೊಬೈಲ್‌ಗಳಲ್ಲಿ ಫೋಟೊ ಕ್ಲಿಕ್ಕಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಖುಷಿಪಟ್ಟರು.
ಇದನ್ನೂ ಓದಿ – ಅಡಿಕೆ ರೇಟ್ | 24 ಜುಲೈ 2023 | ಶಿವಮೊಗ್ಗ, ಸಾಗರ ಸೇರಿದಂತೆ ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?
ಮೈದುಂಬಿದ ತುಂಗೆ ನೋಡಲು ಜನ
ಪ್ರತಿ ಬಾರಿ ಮಂಟಪ ಮುಳುಗಿದಾಗ ಜನರು ಸಮೀಪಕ್ಕೆ ತೆರಳಿ ಮಂಟಪವನ್ನು ಕಣ್ತುಂಬಿಕೊಳ್ಳುತ್ತಿದ್ದರು. ಈ ಬಾರಿ ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಮಂಟಪಕ್ಕೆ ಹೋಗುವ ಎಲ್ಲ ಮಾರ್ಗದಲ್ಲಿಯು ಗೇಟ್‌ಗಳನ್ನು ಬಂದ್ ಮಾಡಲಾಗಿದೆ. ಹಾಗಾಗಿ ಜನರು ತುಂಗಾ ನದಿ ಸೇತುವೆ ಮೇಲೆ ನಿಂತು ಮೈದುಂಬಿದ ತುಂಗೆ ಮತ್ತು ಮಂಟಪ ಮುಳುಗಿರುವುದನ್ನು ವೀಕ್ಷಿಸಬೇಕಾಗಿದೆ. ಕುಟುಂಬ ಸಹಿತ, ಸ್ನೇಹಿತರ ಜೊತೆಗೆ ಬಂದು ತುಂಗಾ ನದಿಯನ್ನು ವೀಕ್ಷಿಸುತ್ತಿದ್ದಾರೆ.
View this post on Instagram
ತೀರ್ಥಹಳ್ಳಿ, ಚಿಕ್ಕಮಗಳೂರು ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು ಹೆಚ್ಚಳವಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422