ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 19 ಫೆಬ್ರವರಿ 2020
ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಯು ಶಾಂತಿ ಮತ್ತು ಸಂಭ್ರಮದಿಂದ ಯಶಸ್ವಿಗೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ. ಶಾಂತರಾಜ್ ಹೇಳಿದರು.
ಇಂದು ಕೋಟೆ ಮಾರಿಕಾಂಬ ದೇವಸ್ಥಾನ ಸಮಿತಿಯೊಂದಿಗೆ ಜಾತ್ರೆ ನಿಮಿತ್ತ ಬಂದೋಬಸ್ತ್ ಕುರಿತು ಸಮಾಲೋಚನೆ ನಡೆಸಿದ ಅವರು, ಜಾತ್ರೆ ಜನರ ಸಂಭ್ರಮ ಮತ್ತು ಸಂತೋಷವನ್ನು ಕೊಡುವ ಹಬ್ಬವಾಗಿದ್ದು, ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.
ಇಬ್ಬರು ಇನ್ಸ್’ಪೆಕ್ಟರ್ ನೇತೃತ್ವದಲ್ಲಿ ಜನಸ್ನೇಹಿ ಪೊಲೀಸ್
ಸಾವಿರಾರು ಭಕ್ತರು ಜಾತ್ರೆಗೆ ಆಗಮಿಸುವ ಹಿನ್ನೆಲೆಯಲ್ಲಿ ದೇವರ ದರ್ಶನಕ್ಕೆ ಮತ್ತು ಜಾತ್ರೆಯಲ್ಲಿ ಸಂಭ್ರಮಿಸಲು ಅನುಕೂಲಕರವಾಗುವಂತೆ ಕೋಟೆ ಸರ್ಕಲ್ ಇನ್ಸ್‌ಪೆಕ್ಟರ್ ಮಾದಪ್ಪ ಮತ್ತು ದೊಡ್ಡಪೇಟೆ ಸರ್ಕಲ್ ಇನ್ಸ್‌ಪೆಕ್ಟರ್ ವಸಂತ್‌ಕುಮಾರ್ ಅವರ ಉಸ್ತುವಾರಿಯಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಮಾಡಲಾಗುವುದು. ಜಾತ್ರೆಯ ನೆಪದಲ್ಲಿ ಸರಗಳ್ಳತನ, ಪಿಕ್‌ಪಾಕೆಟ್ ಕೃತ್ಯಗಳನ್ನು ತಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು.
ಸಂಚಾರ ವ್ಯವಸ್ಥೆ ನಿರ್ವಹಿಸಲು ಸಿದ್ಧತೆ
ಜಾತ್ರೆಯ ದಿನಗಳಲ್ಲಿ ಸಂಚಾರ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಿದ್ದು, ಮಾರಿಕಾಂಬ ಸಮಿತಿಯ ಜೊತೆ ನಿರಂತರ ಸಹಕಾರದೊಂದಿಗೆ ಜಾತ್ರೆಯನ್ನು ಯಶಸ್ವಿಗೊಳಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಭೆಯ ಅಧ್ಯಕ್ಷತೆಯನ್ನು ಮಾರಿಕಾಂಬ ಸಮಿತಿಯ ಅಧ್ಯಕ್ಷರಾದ ಎಸ್.ಕೆ. ಮರಿಯಪ್ಪ, ವಹಿಸಿದ್ದು, ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಅವರ ಜಾತ್ರೆಯ ಪೂರ್ವಸಿದ್ಧತೆಯ ಬಗ್ಗೆ ವಿವರ ನೀಡಿದರು.
ಇದೇ ಸಂದರ್ಭದಲ್ಲಿ ಮಾರಿಕಾಂಬ ಸಮಿತಿವತಿಯಿಂದ ಜಿಲ್ಲಾ ರಕ್ಷಣಾಧಿಕಾರಿ ಮತ್ತು ಇತರೆ ಪೊಲೀಸ್ ಅಧಿಕಾರಿಗಳನ್ನು ಸನ್ಮಾನಿಸಲಾಯಿತು.
ಸಭೆಯಲ್ಲಿ ಹೆಚ್ಚುವರಿ ರಕ್ಷಣಾಧಿಕಾರಿ ಶೇಖರ್, ಪೊಲೀಸ್ ಇನ್ಸ್‌ಪೆಕ್ಟರ್‌ಗಳಾದ ವಸಂತ್‌ಕುಮಾರ್, ಮಾದಪ್ಪ, ಸಬ್ ಇನ್ಸ್‌ಪೆಕ್ಟರ್‌ಗಳಾದ ಶಿವಪ್ರಸಾದ್, ಟ್ರಾಫಿಕ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗಳು, ಮಾರಿಕಾಂಬ ಸಮಿತಿಯ ಪದಾಧಿಕಾರಿಗಳಾದ ಡಿ.ಎಂ. ರಾಮಯ್ಯ, ಹನುಮಂತಪ್ಪ, ತಿಮ್ಮಪ್ಪ, ಲೋಕೇಶ್ ಮತ್ತಿತರರು ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422