ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 20 MARCH 2021
ಕರೋನ ಎರಡನೇ ಅಲೆ ಆತಂಕದ ಹಿನ್ನೆಲೆ ಒಂದೆಡೆ ಜಿಲ್ಲಾಡಳಿತ ಜನರಲ್ಲಿ ಜಾಗೃತಿ ಆರಂಭಿಸಿದೆ. ಮತ್ತೊಂದೆಡೆ ಲಸಿಕೆ ವಿತರಣೆ, ಟೆಸ್ಟಿಂಗ್ ಸಂಖ್ಯೆ ಹೆಚ್ಚಳ ಮತ್ತು ದಂಡದ ಎಚ್ಚರಿಕೆಯನ್ನು ನೀಡುತ್ತಿದೆ.
ಶಿವಮೊಗ್ಗದಲ್ಲಿ ಟೆಸ್ಟಿಂಗ್ ಹೆಚ್ಚಳ
ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು, ಜಿಲ್ಲೆಯಲ್ಲಿ ಕರೋನ ಟೆಸ್ಟಿಂಗ್ ಸಂಖ್ಯೆ ಹೆಚ್ಚಳ ಮಾಡಲಾಗುತ್ತಿದೆ. ಕಳೆದ ಕೆಲವು ದಿನದಿಂದ ಒಂದು ಸಾವಿರಕ್ಕಿಂತಲೂ ಹೆಚ್ಚು ಟೆಸ್ಟಿಂಗ್ ನಡೆಸಲಾಗುತ್ತಿದೆ. ಪ್ರತಿದಿನ ಎರಡು ಸಾವಿರ ಟೆಸ್ಟಿಂಗ್ ಮಾಡುವ ಗುರಿ ಹೊಂದಿದ್ದೇವೆ ಎಂದರು.
ಪಾಸಿಟಿವಿಟಿ ಸಂಖ್ಯೆ ಹಾಗೆ ಇದೆ
ಟೆಸ್ಟಿಂಗ್ ಸಂಖ್ಯೆ ಹೆಚ್ಚಳವಾದರೂ ಶಿವಮೊಗ್ಗದಲ್ಲಿ ಪಾಸಿಟಿವ್ ಸಂಖ್ಯೆ ಸಾಮಾನ್ಯದಂತೆ ಇದೆ. ಸಾವಿರಕ್ಕೂ ಹೆಚ್ಚು ಟೆಸ್ಟ್ ಮಾಡಿದರೂ, ಪ್ರತಿದಿನ 9 ರಿಂದ 10 ಮಂದಿಗಷ್ಟೇ ಪಾಸಿಟಿವ್ ಬರುತ್ತಿದೆ. ಈ ಸಂಖ್ಯೆ ಹೆಚ್ಚಳವಾಗದಂತೆ ನೋಡಿಕೊಳ್ಳಬೇಕಿದೆ. ಅದಕ್ಕಾಗಿ ಜಾಗೃತಿ ಕಾರ್ಯ ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದರು.
ಮಾಸ್ಕ್ ದಂಡ, ಜಾಗೃತಿ
ಕರೋನ, ಸಾಮಾಜಿಕ ಅಂತರ, ಮಾಸ್ಕ್ ಸಂಬಂಧ ಪಂಚಾಯಿತಿ ಹಂತದಿಂದಲೂ ಜಾಗೃತಿ ಮೂಡಿಸಲಾಗುತ್ತಿದೆ. ಹೆಚ್ಚು ಹೆಚ್ಚು ಜಾಗೃತಿ ಮೂಡಿಸಬೇಕು ಎಂದು ಮುಖ್ಯಮಂತ್ರಿ ಅವರು ಇತ್ತೀಚಿನ ಸಭೆಯಲ್ಲಿ ತಿಳಿಸಿದ್ದಾರೆ. ಅದರಂತೆ ಜಾಗೃತಿ ಕಾರ್ಯ ಹೆಚ್ಚಳ ಮಾಡಲಾಗಿದೆ. ಇಷ್ಟಾದರೂ ಜನರು ಜಾಗೃತರಾಗದಿದ್ದರೆ ದಂಡ ವಿಧಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.
ದಂಡ ಸಂಬಂಧ ಡಿಸಿ ಹೇಳಿದ್ದೇನು | ವಿಡಿಯೋ ರಿಪೋರ್ಟ್
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422