
ಶಿವಮೊಗ್ಗ ಲೈವ್.ಕಾಂ | SHIMOGA | 07 ಮೇ 2020
ಮಾಸ್ಕ್ ಹಾಕದೆ ರಸ್ತೆಗಿಳಿದವರಿಗೆ ಮಹಾನಗರ ಪಾಲಿಕೆ ವತಿಯಿಂದ ದಂಡ ಹಾಕಲಾಗುತ್ತಿದೆ. ಶಿವಮೊಗ್ಗದ ಗೋಪಿ ಸರ್ಕಲ್ನಲ್ಲಿ ವಾಹನಗಳನ್ನು ತಡೆದು ದಂಡ ಕಟ್ಟಿಸಿಕೊಳ್ಳಲಾಗುತ್ತಿದೆ.
ಮಾಸ್ಕ್ ಹಾಕದೆ ರಸ್ತೆಯಲ್ಲಿ ಓಡಾಡುತ್ತಿದ್ದವನ್ನು ಹಿಡಿದು 200 ರೂ. ದಂಡ ಹಾಕಲಾಗುತ್ತಿದೆ. ಇವತ್ತು ಗೋಪಿ ಸರ್ಕಲ್ನಲ್ಲಿ ನೂರಕ್ಕೂ ಹೆಚ್ಚು ಜನರಿಗೆ ದಂಡ ಹಾಕಲಾಗಿದೆ. ಪಾಲಿಕೆ ಅಧಿಕಾರಿಗಳ ತಂಡ ಇವತ್ತು ಸರ್ಕಲ್ನಲ್ಲಿ ದಿಢೀರ್ ಕಾರ್ಯಾಚರಣೆ ನಡೆಸಿತು.
ವಾಹನಗಳಲ್ಲಿ ಮಾಸ್ಕ್ ಇಲ್ಲದೆ ಬರುವವರನ್ನು ತಡೆದು ದಂಡ ಹಾಕಲಾಗುತ್ತಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]