ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 23 APRIL 2021
ಶಿವಮೊಗ್ಗದಲ್ಲಿ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಮಾಸ್ಕ್ ಜಾಗೃತಿ ಪಾದಯಾತ್ರೆ ನಡೆಸಲಾಯಿತು.
ಶಿವಪ್ಪನಾಯಕ ಪ್ರತಿಮೆ ಮುಂಭಾಗದಿಂದ ಗಾಂಧಿ ಬಜಾರ್ ಮೂಲಕ ರಾಮಣ್ಣ ಶ್ರೇಷ್ಠಿ ಪಾರ್ಕ್ವರೆಗೆ ಸಚಿವ ಈಶ್ವರಪ್ಪ ಪಾದಯಾತ್ರೆ ನಡೆಸಿದರು. ಈ ವೇಳೆ ಮಾಸ್ಕ್ ಧರಿಸದೆ ಗಾಂಧಿ ಬಜಾರ್ನಲ್ಲಿ ಓಡಾಡುತ್ತಿದ್ದವರಿಗೆ ಸಚಿವ ಈಶ್ವರಪ್ಪ ಮಾಸ್ಕ್ ವಿತರಿಸಿದರು. ಅಲ್ಲದೆ ಮಾಸ್ಕ್ ಧರಿಸಿಕೊಂಡು ಓಡಾಡುವಂತೆ ಮನವಿ ಮಾಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಜನರು ಜಾಗೃತರಾಗಿದ್ದಾರೆ. ಅಲ್ಲಿಂದ ಇಲ್ಲಿ ತನಕ ನಡೆದು ಬಂದೆ. ಹತ್ತು ಮಾಸ್ಕ್ ಕೊಟಿದ್ದೇವಷ್ಟೆ. ಜಾಗೃತಿ ಮೂಡಿಸಲು ಸೀಮಿತವಾಗಿ ಮಾಡಿರುವ ಕಾರ್ಯ. ಉಳಿದ ಪ್ರದೇಶದಲ್ಲಿ ಜನರು ಇದನ್ನು ಮಾಡಬೇಕು. ಯಾರಾದರೂ ಮಾಸ್ಕ್ ಇಲ್ಲದೆ ಓಡಾಡುತ್ತಿದ್ದರೆ ಅವರಿಗೆ ಮಾಸ್ಕ್ ನೀಡಬೇಕು ಎಂದರು.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್, ಮೇಯರ್ ಸುನೀತಾ ಅಣ್ಣಪ್ಪ, ಪಾಲಿಕೆ ಕಮಿಷನರ್ ಚಿದಾನಂದ ವಟಾರೆ ಸೇರಿದಂತೆ ಹಲವರು ಈ ವೇಳೆ ಇದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422