SHIVAMOGGA LIVE NEWS, 4 JANUARY 2024
ಶಿವಮೊಗ್ಗ : ಮೆಗ್ಗಾನ್ ಆಸ್ಪತ್ರೆಯಲ್ಲಿ ಬಾಣಂತಿಯೊಬ್ಬರು (Maternal Death) ಮೃತಪಟ್ಟಿದ್ದಾರೆ. ತೀವ್ರ ರಕ್ತಸ್ರಾವವಾಗಿ ಹೃದಯಾಘಾತ ಸಂಭವಿಸಿ ಬಾಣಂತಿ ಕೊನೆಯುಸಿರೆಳೆದಿದ್ದಾರೆ. ಹರಿಹರ ಮೂಲದ ಕವಿತಾ ಮೃತ ಬಾಣಂತಿ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಆಕ್ರೋಶ, ಕಾರಣವೇನು?
ಜನವರಿ 1ರಂದು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ಕವಿತಾ, ಜನವರಿ 3ರಂದು ಬೆಳಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಸ್ವಲ್ಪ ಸಮಯದ ಬಳಿಕ ಕವಿತಾಗೆ ತೀವ್ರ ರಕ್ತಸ್ರಾವ ಉಂಟಾಗಿದೆ. ಕೆಲವೇ ಕ್ಷಣಕ್ಕೆ ಹೃದಯಾಘಾತ ಸಂಭವಿಸಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ತಿಮ್ಮಪ್ಪ ತಿಳಿಸಿದ್ದಾರೆ.
ಗರ್ಭ ಚೀಲದಲ್ಲಿ ನೀರಿನ ಅಂಶ ಸೋರಿಕೆಯಾಗಿ ಹೊರ ಬರುತ್ತದೆ. ಅಪರೂಪದಲ್ಲಿ ಅಪರೂಪದ ಪ್ರಕರಣಗಳಲ್ಲಿ ಈ ನೀರಿನ ಅಂಶ ರಕ್ತನಾಳಕ್ಕೆ ಸೇರುತ್ತದೆ. ಆಗ ತೀವ್ರ ರಕ್ತಸ್ರಾವ ಉಂಟಾಗುತ್ತದೆ. ಇಂತಹ ಸಂದರ್ಭ ಹೃದಯಾಘಾತ ಸಂಭವಿಸುತ್ತದೆ.
ಡಾ. ತಿಮ್ಮಪ್ಪ, ವೈದ್ಯಕೀಯ ಅಧೀಕ್ಷಕ
ಬಾಣಂತಿ ಸಾವು ಪ್ರಕರಣ ಸಂಬಂಧ ಮೆಗ್ಗಾನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರ ಮಟ್ಟದಲ್ಲಿ ಸಮಿತಿ ರಚಿಸಿ ಮಾಹಿತಿ ಪಡೆಯಲಾಗುತ್ತದೆ. ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿಗು ಈ ಕುರಿತು ಸಂಪೂರ್ಣ ವಿವರಣೆ ನೀಡಬೇಕಾಗುತ್ತದೆ.
ಇದನ್ನೂ ಓದಿ » ಭದ್ರಾ ಡ್ಯಾಮ್ ನಾಲೆಗಳಿಗೆ ನೀರು ಹರಿಸುವ ದಿನಾಂಕ ಪ್ರಕಟ