ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಸೆಪ್ಟೆಂಬರ್ 2021
ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್ 1ರಂದು ದೆಹಲಿಯ ಅಂಬೇಡ್ಕರ್ ಇಂಟರ್ ನ್ಯಾಷನಲ್ ಸೆಂಟರ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸ್ವಚ್ಛ ಭಾರತ್ ಮಿಷನ್ 2.0 ಹಾಗೂ ಅಮೃತ್ ಯೋಜನೆ 2.0ಗೆ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಮೇಯರ್ ಸುನೀತಾ ಅಣ್ಣಪ್ಪ ಅವರಿಗೆ ಪ್ರಧಾನಿ ಕಾರ್ಯಾಲಯದಿಂದ ಪತ್ರ ಬಂದಿದ್ದು ಅವರು ಸೆ.30ರಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಶಿವಮೊಗ್ಗ, ಮೈಸೂರು, ದಾವಣಗೆರೆ ಪಾಲಿಕೆ ಮೇಯರ್‌ಗಳು ಹಾಗೂ 10 ನಗರಸಭೆ ಅಧ್ಯಕ್ಷರಿಗೆ ಪ್ರಧಾನಿ ಕಾರ್ಯಾಲಯದಿಂದ ಆಹ್ವಾನ ಬಂದಿದೆ. ಈ ಗೌರವಕ್ಕೆ ಶಿವಮೊಗ್ಗದ ಪ್ರಥಮ ಪ್ರಜೆ ಸುನೀತಾ ಅಣ್ಣಪ್ಪ ಕೂಡ ಪಾತ್ರರಾಗಿರುವುದು ವಿಶೇಷ.
ಸ್ವಚ್ಛ ಭಾರತ್ ಮಿಷನ್ ಹಾಗೂ ಅಮೃತ್ ಯೋಜನೆಯ 2ನೇ ಹಂತದ ಉದ್ಘಾಟನೆ ಜತೆಗೆ ಸ್ಥಳೀಯ ಸಂಸ್ಥೆಗಳ ನಿರ್ವಹಣೆ ಬಗ್ಗೆ ವಿಚಾರ ಸಂಕಿರಣಗಳನ್ನೂ ಏರ್ಪಡಿಸಲಾಗಿದೆ. ಪ್ರಧಾನಿ ಕಾರ್ಯಾಲಯದಿಂದ ಆಹ್ವಾನ ಬಂದಿರುವುದಕ್ಕೆ ಖುಷಿಯಾಗಿದೆ. ಅಲ್ಲಿ ಪಡೆಯುವ ಅನುಭವವನ್ನು ನಗರದ ಅಭಿವೃದ್ಧಿಗೆ ಅಳವಡಿಸಲು ಪಯತ್ನಿಸುತ್ತೇನೆ ಎಂದು ಮೇಯರ್ ಸುನೀತಾ ಅಣ್ಣಪ್ಪ ಪ್ರತಿಕ್ರಿಯಿಸಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
Yes Sunitha Mam good, we are appreciating but swach Barath only Bayee mathighe yaru saha follow maduvudilla yakendare funishment annuvude yeella, footpath madiddira tarakari, hannuhampalu maralu janasamanyaru Road nalli nadeyuttare