ನಂಜ್ಪಪ್ಪ, ಮ್ಯಾಕ್ಸ್ ಆಸ್ಪತ್ರೆಗಳ ಬಳಿ ಟ್ರಾಫಿಕ್ ಜಾಮ್, ಪರಿಶೀಲನೆಗಿಳಿದ ಮೇಯರ್, ಉಪಮೇಯರ್, ಪರಿಹಾರದ ಚರ್ಚೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

125203640 1007170469762863 4215862945643792899 o.jpg? nc cat=109&ccb=2& nc sid=730e14& nc ohc=bJYhOzOjCHwAX f8PRZ& nc ht=scontent.fblr1 3

ಶಿವಮೊಗ್ಗ ಲೈವ್.ಕಾಂ |SHIMOGA NEWS | 18 NOVEMBER 2020

ಕುವೆಂಪು ರಸ್ತೆಗೆ ಹೊಂದಿಕೊಂಡಂತೆ ಇರುವ ಖಾಸಗಿ ಆಸ್ಪತ್ರೆಗಳ ಬಳಿ ವಾಹನ ದಟ್ಟಣೆ, ಪಾರ್ಕಿಂಗ್ ಸಮಸ್ಯೆ ಕುರಿತು ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಮತ್ತು ಕಾರ್ಪೊರೇಟರ್‍ಗಳು ಪರಿಶೀಲನೆ ನಡೆಸಿದರು.

ಮೇಯರ್ ಸುವರ್ಣಾ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಕಮಿಷನರ್ ಚಿದಾನಂದ ವಟಾರೆ, ಆಡಳಿತ ಪಕ್ಷದ ನಾಯಕ ಚನ್ನಬಸಪ್ಪ ನೇತೃತ್ವದ ನಿಯೋಗ ಟ್ರಾಫಿಕ್ ಸಮಸ್ಯೆ ಕುರಿತು ಪರಿಶೀಲನೆ ನಡೆಸಿತು.

ಯಾವಾಗಲೂ ಟ್ರಾಫಿಕ್ ಜಾಮ್

  • ನಂಜಪ್ಪ ಆಸ್ಪತ್ರೆ, ಮ್ಯಾಕ್ಸ್ ಆಸ್ಪತ್ರೆ, ಸರ್ಜಿ ಆಸ್ಪತ್ರೆ ಬಳಿ ಯಾವಾಗಲೂ ಟ್ರಾಫಿಕ್ ಜಾಮ್ ಆಗುತ್ತದೆ.
  • ಆಸ್ಪತ್ರೆಗೆ ಬರುವವರು ರಸ್ತೆ ಬದಿಯಲ್ಲಿ ವಾಹನಗಳನ್ನು ನಿಲ್ಲಿಸುವುದರಿಂದ ಟ್ರಾಫಿಜ್ ಜಾಮ್ ಆಗುತ್ತದೆ.
  • ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸದೆ ಇರುವುದರಿಂದ ಬೈಕು, ಕಾರು, ಆಂಬುಲೆನ್ಸ್‍ಗಳನ್ನು ರಸ್ತೆ ಮೇಲೆ ನಿಲ್ಲಿಸಲಾಗುತ್ತಿದೆ.
  • ಪಾರ್ಕಿಂಗ್ ಸಮಸ್ಯೆಯಿಂದಾಗಿ ಈ ಭಾಗದಲ್ಲಿ ವಾಹನಗಳ ಸಂಚಾರಕ್ಕೆ ಅಡ್ಡಿಯಾಗುತ್ತಿದೆ.
  • ಆಸ್ಪತ್ರೆಗಳಷ್ಟೆ ಅಲ್ಲ ಈ ಭಾಗದಲ್ಲಿ ಹೊಟೇಲ್‍ಗಳು, ಕಚೇರಿಗಳು ಇರುವುದರಿಂದ ವಾಹನಗಳನ್ನು ರಸ್ತೆಗೆ ತಂದು ನಿಲ್ಲಿಸಲಾಗುತ್ತಿದೆ.

ಎಡ ಬಲ ಪಾಲಿಸಿಯೋ, ಒನ್‍ ವೇ ರಸ್ತೆಯೋ

ಒಂದು ದಿನ ಎಡ ಭಾಗದಲ್ಲಿ ಪಾರ್ಕಿಂಗ್, ಮತ್ತೊಂದು ದಿನ ಬಲ ಭಾಗದಲ್ಲಿ ಪಾರ್ಕಿಂಗ್ ಮಾಡುವ ಕುರಿತು ಚಿಂತಿಸಲಾಗಿದೆ. ಇಲ್ಲವಾದರೆ ಈ ರಸ್ತೆಯಲ್ಲಿ ಒನ್‍ ವೇ ವ್ಯವಸ್ಥೆ ಮಾಡಬೇಕೋ ಅನ್ನುವ ಕುರಿತು ಯೋಚಿಸಲಾಗಿದೆ. ಈ ಸಂಬಂಧ ಶಿವಮೊಗ್ಗ ಡಿವೈಎಸ್‍ಪಿ ಅವರೊಂದಿಗೆ ಚರ್ಚಿಸಲು ನಿರ್ಧರಿಸಲಾಗಿದೆ.

ಕನ್ಸರ್‌ವೆನ್ಸಿಯಲ್ಲಿ ಪಾರ್ಕಿಂಗ್

ಆಸ್ಪತ್ರೆಯ ಎರಡು ಕಡೆಯಲ್ಲಿ ಕನ್ಸರ್‍ವೆನ್ಸಿಗಳಿವೆ. ಈ ಕನ್ಸರ್‍ವೆನ್ಸಿಗಳನ್ನು ಬಳಕೆ ಮಾಡಿಕೊಂಡು ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬಹುದಾಗಿದೆ. ಮ್ಯಾಕ್ಸ್ ಮತ್ತು ನಂಜಪ್ಪ ಆಸ್ಪತ್ರೆ ನಡುವಿನ ಕನ್ಸರ್‍ವೆನ್ಸಿಯಲ್ಲಿ ಸದ್ಯಕ್ಕೆ ಆಸ್ಪತ್ರೆಯ ಸಿಬ್ಬಂದಿಗಳ ಕಾರುಗಳನ್ನಷ್ಟೇ ಪಾರ್ಕ್ ಮಾಡಲಾಗುತ್ತಿದೆ.

ಸೆಲ್ಲರ್ ತೆರವಿನಿಂದ ಎಲ್ಲವು ಸರಿ ಹೋಗಿತ್ತು

ಚಾರುಲತಾ ಸೋಮಲ್ ಅವರು ಶಿವಮೊಗ್ಗ ಮಹಾನಗರ ಪಾಲಿಕೆ ಕಮಿಷನರ್ ಆಗಿದ್ದಾಗ ಸೆಲ್ಲರ್ ತೆರವು ಕಾರ್ಯಾಚರಣೆ ಮಾಡಿದ್ದರು. ಆಗ ಈ ರಸ್ತೆಯಲ್ಲಿ ಪಾರ್ಕಿಂಗ್ ನಿಷೇಧಿಸಲಾಗಿತ್ತು. ಅಲ್ಲದೆ ಸೆಲ್ಲರ್‍ಗಳು ತೆರವಾದಾಗ ಈ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ದೂರಾಗಿತ್ತು. ಈ ಕುರಿತು ಪಾಲಿಕೆ ಮತ್ತು ಪೊಲೀಸ್ ಇಲಾಖೆ ಹೆಚ್ಚು ಯೋಚಿಸಬೇಕಿದೆ.

ಆಸ್ಪತ್ರೆಗಳಿಗೆ ಬರುವ ವಾಹನಗಳಿಂದಾಗಿ ಕುವೆಂಪು ರಸ್ತೆ, ಅಚ್ಚುತರಾವ್ ಬಡಾವಣೆಯ ರಸ್ತೆಗಳು, ದುರ್ಗಿಗುಡಿಯ ವಿವಿಧ ಕ್ರಾಸ್‍ಗಳಲ್ಲಿ ವಾಹನ ದಟ್ಟಣೆ ಉಂಟಾಗುತ್ತಿದೆ. ಇದನ್ನು ನಿಯಂತ್ರಿಸುವ ನಿ‍ಟ್ಟಿನಲ್ಲಿ ಮಹಾನಗರ ಪಾಲಿಕೆ ಮತ್ತು ಪೊಲೀಸ್ ಇಲಾಖೆ ಚಿಂತಿಸಬೇಕಿದೆ.

122336553 983106055502638 6844548172344119085 n.jpg? nc cat=107& nc sid=110474& nc ohc=JrLgAWzRixQAX9XQ8JM& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 18, 2020

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

Leave a Comment