ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಸೆಪ್ಟಂಬರ್ 2020
ಮಹಾನಗರಪಾಲಿಕೆ ವ್ಯಾಪ್ತಿಯ ಸರ್ಕಾರಿ ಶಾಲೆಗಳ ದುರಸ್ತಿ ಕಾಮಗಾರಿಯನ್ನು ಪಾಲಿಕೆಯ ಮೇಯರ್ ಸುವರ್ಣಾ ಶಂಕರ್, ಉಪಮೇಯರ್ ಸುರೇಖಾ ಮುರಳೀಧರ್ ನೇತೃತ್ವದ ನಿಯೋಗ ಪರಿಶೀಲನೆ ನಡೆಸಿತು.
ಪಾಲಿಕೆ ವ್ಯಾಪ್ತಿಯ ೮೭ ಶಾಲೆಗಳ ಅಭಿವೃದ್ಧಿಗಾಗಿ ಸರ್ಕಾರದ ಎಸ್‌ಎಫ್‌ಸಿ ಅನುದಾನದಲ್ಲಿ ಸುಮಾರು ೨೯ ಕೋಟಿ ಹಣ ಬಿಡುಗಡೆಯಾಗಿದೆ. ಪಾಲಿಕೆ ಕಾಮಗಾರಿಗಾಗಿ ಟೆಂಡರ್ ಕರೆದಿತ್ತು. ಈಗಾಗಲೇ ಕೆಲವು ಶಾಲೆಗಳ ಕಾಮಗಾರಿಗಳು ಪೂರ್ಣಗೊಂಡಿದೆ. ಇನ್ನು ಕೆಲವು ಶಾಲೆಗಳಲ್ಲಿ ಕಾಮಗಾರಿ ಪ್ರಗತಿಯಲ್ಲಿವೆ.
ಈ ಹಣದಲ್ಲಿ ಶಾಲೆಗಳ ಶೌಚಾಲಯಗಳು ಸೇರಿದಂತೆ ಕಾಯಕಲ್ಪ ನೀಡಲಾಗುತ್ತಿದೆ.
ಇಂದು ಪಾಲಿಕೆಯ ತಂಡ ನವುಲೆ ಸರ್ಕಾರಿ ಪ್ರಾಥಮಿಕ ಶಾಲೆ, ರಾಗಿಗುಡ್ಡದ ಕನ್ನಡ ಮತ್ತು ಉರ್ದು ಪ್ರಾಥಮಿಕ ಶಾಲೆ, ತ್ಯಾವರೆಚಟ್ನಳ್ಳಿಯ ಸರ್ಕಾರಿ ಶಾಲೆ, ಶೇಷಾದ್ರಿಪುರ, ಬಾಪೂಜಿ ನಗರ, ಕೋಟೆ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಕಾಮಗಾರಿಗಳ ಪರಿಶೀಲನೆ ನಡೆಸಿತು.
ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಭಾಕರ್, ಸದಸ್ಯ ಎಸ್.ಜ್ಞಾನೇಶ್ವರ್, ಆಯಾ ಶಾಲೆಗಳ ಎಸ್‌ಡಿಎಂಸಿ ಸದಸ್ಯರು, ಮುಖ್ಯೋಪಾಧ್ಯಾಯಕರು ಸೇರಿದಂತೆ ಹಲವರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]