ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 17 JANUARY 2025
ಶಿವಮೊಗ್ಗ : ಮುಖ್ಯಮಂತ್ರಿ (CM) ಹುದ್ದೆ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಗಳು ಖಾಲಿ ಇಲ್ಲ. ಆದ್ದರಿಂದ ನಾಯಕತ್ವ ಬದಲಾವಣೆಯ ಚರ್ಚೆಯೆ ಇಲ್ಲ. ಬೆಳಗಾವಿ ಕಾರ್ಯಕ್ರಮದ ಯಶಸ್ಸಿನತ್ತ ನಮ್ಮೆಲ್ಲ ನಾಯಕರು ಗಮನ ಹರಿಸಿದ್ದಾರೆ. ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಶಿವಮೊಗ್ಗದಲ್ಲಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್, ನಾಯಕತ್ವ ಮತ್ತು ಅಧ್ಯಕ್ಷ ಸ್ಥಾನದ ಬದಲಾವಣೆ ಪ್ರಸ್ತಾಪ ಹೈಕಮಾಂಡ್ ಮುಂದೆ ಇಲ್ಲ. ಈಗ ಏನಿದ್ದರೂ ಬೆಳಗಾವಿ ಕಾರ್ಯಕ್ರಮ ಯಶಸ್ವಿಗೊಳಿಸುವತ್ತ ನಾಯಕರು ತಮ್ಮ ಗಮನ ಕೇಂದ್ರೀಕರಿಸಿದ್ದಾರೆ ಎಂದು ತಿಳಿಸಿದರು.

ಬೇರೆ ಪಕ್ಷದವರೊಂದಿಗೆ ಊಟ ಸಹಜ
ಬೇರೆ ಪಕ್ಷದ ನಾಯಕರೊಂದಿಗೆ ಊಟ ಮಾಡಿದರೆ ಅದಕ್ಕೆ ಅರ್ಥ ಕಲ್ಪಿಸುವುದು ಸರಿಯಲ್ಲ. ಅದರಲ್ಲಿ ಯಾವುದೇ ತಪ್ಪು ಇರುವುದಿಲ್ಲ. ಆರ್.ಅಶೋಕ್ ಬಿಜೆಪಿಯ ಅನೇಕ ಮುಖಂಡರು ನಮ್ಮ ಮನೆಗು ಬಂದು ಹೋಗಿದ್ದಾರೆ. ಬಸವರಾಜ ಬೊಮ್ಮಾಯಿ ಅವರ ಮನೆಗೆ ನಾನು ಹೋಗಿದ್ದೆ. ಹಾಗೆಂದ ಮಾತ್ರಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದರು.
ಇದನ್ನೂ ಓದಿ » ಕ್ವಿಂಟಾಲ್‌ಗಟ್ಟಲೆ ಅಡಿಕೆ ಕದ್ದಿದ್ದ ಮೂವರು ಅರೆಸ್ಟ್, ಏನೇನೆಲ್ಲ ವಶಕ್ಕೆ ಪಡೆಯಲಾಯ್ತು?
LATEST NEWS
- ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್, ದಾಖಲಾಯ್ತು ಕೇಸ್

- ಗುಡ್ಡೇಕಲ್ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

- ಭದ್ರಾವತಿಯ ಭದ್ರಾ ನದಿಗೆ ರಾಶಿ ರಾಶಿ ತ್ಯಾಜ್ಯ, ವೈಜ್ಞಾನಿಕ ಕ್ರಮಕ್ಕೆ ಒತ್ತಾಯ

- ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

- ಶಿವಮೊಗ್ಗ ಜಿಲ್ಲೆಯ ಮನೆ ಮನೆಗೂ ಭೇಟಿ ನೀಡ್ತಾರೆ ಗಣತಿದಾರರು, ಏನೇನು ಮಾಹಿತಿ ಕೊಡಬೇಕು?

About The Editor
ನಿತಿನ್ ಆರ್.ಕೈದೊಟ್ಲು















