
ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಮೇ 2020
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಕರೋನ ಸೋಂಕಿತರ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಮತ್ಯಾರಿಗೂ ಸೋಂಕು ಹರಡದಂತೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ.
ಸೋಂಕಿತ ಎಂಟು ಮಂದಿಯನ್ನು ಪ್ರತ್ಯೇಕ ಐಸೊಲೇಷನ್ ವಾರ್ಡ್‍ನಲ್ಲಿ ಇರಿಸಲಾಗಿದೆ. ಈ ವಾರ್ಡ್‍ಗೆ ಯಾರಂದರೆ ಅವರಿಗೆ ಪ್ರವೇಶ ಇರುವುದಿಲ್ಲ.
ಸೋಂಕಿತರ ಚಿಕಿತ್ಸೆ ನೀಡುವ ವೈದ್ಯರು, ವೈದ್ಯಕೀಯ ಸಿಬ್ಬಂದಿಗಳನ್ನು ಮೊದಲೇ ಗುರುತು ಮಾಡಿಕೊಳ್ಳಲಾಗಿದೆ. ಅವರಷ್ಟೇ ಐಸೊಲೇಷನ್ ವಾರ್ಡ್ ಒಳಗೆ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ.

ಈ ವೈದ್ಯರು ತಮ್ಮ ಕುಟುಂಬ ಮತ್ತು ಇತರೆ ಜನ ಸಂಪರ್ಕದಿಂದ ದೂರ ಉಳಿಯಲಿದ್ದಾರೆ. ಇವರು ಉಳಿಯೋಕೆ ಹೊಟೇಲ್‍ನಲ್ಲಿ ರೂಂ ನಿಗದಿಪಡಿಸಲಾಗಿದೆ ಎಂದು ಸಚಿವ ಈಶ್ವರಪ್ಪ ತಿಳಿಸಿದ್ದಾರೆ.
ಇವತ್ತಿನಿಂದ ಮೆಗ್ಗಾನ್ ಆಸ್ಪತ್ರೆಯಲ್ಲಿ ಇತರೆ ಚಿಕಿತ್ಸೆಗಳನ್ನು ನಿಲ್ಲಿಸಲಾಗಿದೆ. ಉಳಿದೆಲ್ಲ ಚಿಕಿತ್ಸೆಗೆ ಈ ಹಿಂದೆ ಯೋಚಿಸಿದಂತೆ ಬೇರೆ ಬೇರೆ ಆಸ್ಪತ್ರೆಗಳಲ್ಲಿ ಮುಂದುವರೆಸಲಾಗುತ್ತದೆ.
ವೈದ್ಯರಷ್ಟೇ ಅಲ್ಲ, ಆಂಬುಲೆನ್ಸ್ ಸಿಬ್ಬಂದಿ, ಆಸ್ಪತ್ರೆಯಲ್ಲಿ ಈ ಐಸೊಲೇಷನ್ ವಾರ್ಡ್‍ನಲ್ಲಿ ಕಾರ್ಯನಿರ್ವಹಿಸುವ ಆಯ್ದ ಸಿಬ್ಬಂದಿಗೆ ಪಿಪಿಇ ಕಿಟ್ ನೀಡಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






