ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಜುಲೈ 2020
ಮೆಗ್ಗಾನ್ ಆಸ್ಪತ್ರೆಯಲ್ಲಿ ಹೊರ ರೋಗಿ ವಿಭಾಗದಲ್ಲಿ ಚೀಟಿ ಕೊಡುತ್ತಿದ್ದ ಯುವಕನಿಗೆ ಕರೋನ ಸೋಂಕು ತಗುಲಿದೆ. ಆತನಿಗೆ ಚಿಕಿತ್ಸೆ ಆರಂಭಿಸಲಾಗಿದ್ದು, ಮನೆಯವರನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಯುವಕ (32) ಆನಂದಪುರ ಸಮೀಪದ ಗಿಳಾಲಗುಂಡಿಯಿಂದ ಪ್ರತಿದಿನ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಬರುತ್ತಿದ್ದ. ಹಾಗಾಗಿ ಗಿಳಾಲಗುಂಡಿಯಲ್ಲಿ ಇವರ ಮನೆಯಲ್ಲಿರುವವರನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿದೆ. ಅಲ್ಲದೆ, ಯುವಕನ ಮನೆ ಇರುವ ರಸ್ತೆಯನ್ನು ಸೀಲ್ಡೌನ್ ಮಾಡಲಾಗಿದೆ.
ಸೋಂಕಿನ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಯುವಕ ಗಂಟಲು ದ್ರವ ಪರೀಕ್ಷೆಗೆ ಒಳಗಾಗಿದ್ದ. ಮಂಗಳವಾರ ವರದಿ ಬಂದಿದ್ದು, ಆಸ್ಪತ್ರೆಗೆ ದಾಖಲು ಮಾಡಿಕೊಳ್ಳಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]