ಮೆಗ್ಗಾನ್ ಆಸ್ಪತ್ರೆ ಸಂಪೂರ್ಣ ಸುಧಾರಿಸಬೇಕು, ಡಾಕ್ಟರ್‌ಗಳಿಗೆ ಮಿನಿಸ್ಟರ್ ಕಿವಿಮಾತು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಜೂನ್ 2020

ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬರುವ ರೋಗಿಗಳಿಗೆ ಯಾವುದೇ ಲೋಪ ಆಗದಂತೆ ಸೌಲಭ್ಯ ಕಲ್ಪಿಸಬೇಕು. ವೈದ್ಯರು ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕೆಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

103594971 1142869339407818 1243986487116629677 o.jpg? nc cat=106& nc sid=8024bb& nc ohc=bnMwZK1M5 0AX sI2P& nc ht=scontent.fblr11 1

ಮೆಗ್ಗಾನ್ ಆಸ್ಪತ್ರೆಯ ಸಭಾಂಗಣದಲ್ಲಿ ಇವತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮೆಗ್ಗಾನ್‍ ಆಸ್ಪತ್ರೆ ವಿವಿಧ ವಿಭಾಗಗಳ ವೈದ್ಯರೊಂದಿಗೆ ಸಮಾಲೋಚನಾ ಸಭೆ ನಡೆಸಿ, ವೈದ್ಯರ ಕುಂದುಕೊರತೆ ಆಲಿಸಿದರು.

ರೋಗಿಗಳಿಗೆ ಒಳ್ಳೆಯದಾಗಬೇಕು ಅನ್ನುವ ಸಲುವಾಗಿ ನಿಮ್ಮ ಪ್ರಯತ್ನವೇನೂ ಎಂದು ಪ್ರಶ್ನಿಸಿ, ತರಾಟೆಗೆ ತೆಗೆದುಕೊಂಡರು. ನಿಮ್ಮ ಶಿಕ್ಷಣ ಅನುಭವಗಳಿಂದ ರೋಗಿಗಳಿಗೆ ಯಾವ ಅನುಕೂಲವಾಗುತ್ತಿದೆ. ರಾಜ್ಯದಲ್ಲಿಯೇ ಮೆಗ್ಗಾನ್ ಆಸ್ಪತ್ರೆಯನ್ನು ಮಾದರಿಯಾಗಿ ರೂಪಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ವ್ಯವಸ್ಥೆ ಸುಧಾರಿಸಬೇಕು. ಮೆಗ್ಗಾನ್ ಆಸ್ಪತ್ರೆಗೆ ಬರುವ ರೋಗಿಗಳು ಇಲ್ಲಿನ ವ್ಯವಸ್ಥೆ ಸುಧಾರಿಸಿದೆ ಎಂದು ಹೇಳಬೇಕು ಎಂದರು.

ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ಮೆಗ್ಗಾನ್ ಆಸ್ಪತ್ರೆಗೆ ಬರುವ ಹೆಚ್ಚಿನ ರೋಗಿಗಳನ್ನು ಬೇರೆ ಆಸ್ಪತ್ರೆಗೆ ಕಳಿಸಲಾಗುತ್ತಿದೆ. ಮುಖ್ಯಮಂತ್ರಿಯವರ ತವರು ಜಿಲ್ಲೆಯಲ್ಲಿಯೇ ಹೀಗಾದರೆ ಹೇಗೆ ಎಂದು ಪ್ರಶ್ನಿಸಿದರು. ಲೋಪಗಳನ್ನು ಗುರುತಿಸಿ ಎಲ್ಲ ವಿಭಾಗಗಳಿಗೆ ಅಗತ್ಯ ವೈದ್ಯರನ್ನು ನೇಮಿಸಬೇಕು ಎಂದು ಹೇಳಿದರು.

ಸಾಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಮೇಯರ್ ಸುವರ್ಣಾ ಶಂಕರ್, ಉಪಮೇಯರ್ ಸುರೇಖಾ ಮುರಳೀಧರ್, ಜಿಲ್ಲಾಕಾರಿ ಕೆ.ಬಿ.ಶಿವಕುಮಾರ್, ಸಿಇಓ ವೈಶಾಲಿ, ಆಸ್ಪತ್ರೆ ಸಲಹಾ ಸಮಿತಿ ಸದಸ್ಯರಾದ ಡಾ.ವಾಣಿ ಕೋರಿ, ಡಾ.ಗೌತಮ್, ದಿವಾಕರ್ ಶೆಟ್ಟಿ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 13, 2020

Leave a Comment