ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 9 ಮೇ 2020
ಮೆಗ್ಗಾನ್ ಆಸ್ಪತ್ರೆಗೆ ಕಾಯಕಲ್ಪ ನೀಡಲಾಗುತ್ತಿದ್ದು, ಹೃದ್ರೋಗ ಮತ್ತು ನರ ರೋಗ ವಿಭಾಗ ಒಂದು ವಾರದ ಒಳಗಾಗಿ ಪ್ರಾರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವ ಈಶ್ವರಪ್ಪ, ಸೂಪರ್ ಸ್ಪೆಷಾಲಿಟಿ ವಿಭಾಗ ಪ್ರಾರಂಭವಾಗಿ 10 ವರ್ಷಗಳಾದರೂ ಇದುವರೆಗೆ ಪ್ರಾರಂಭವಾಗಿಲ್ಲ. ಇದೀಗ ಮೆಗ್ಗಾನ್ ಆಸ್ಪತ್ರೆಯ 3 ಜನ ಹೃದ್ರೋಗ ತಜ್ಞರು ಮತ್ತು ಒಬ್ಬ ನರರೋಗ ತಜ್ಞರ ಸೇವೆಯನ್ನು ಪಡೆದುಕೊಂಡು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೃದ್ರೋಗ ಮತ್ತು ನರರೋಗ ವಿಭಾಗದ ಒಪಿಡಿ ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ಈ ವಿಭಾಗಕ್ಕೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದರು.

ಹುಟ್ಟಿನಿಂದಲೇ ಕಿವುಡುತನ ಇರುವ ಮಕ್ಕಳಿಗೆ ಕಾಕ್ಲಿಯರ್ ಇಂಪ್ಲಾಂಟ್ ಅಳವಡಿಸಲು ಮತ್ತು ವಾಕ್ಶ್ರವಣ ಕೇಂದ್ರದಲ್ಲಿ ಬಿಎಸ್ಸಿ (ಸ್ಪೀಚ್ ಅಂಡ್ ಹಿಯರಿಂಗ್) ತರಗತಿಗಳನ್ನು ಆರಂಭಿಸಲು 4.84ಕೋಟಿ ರೂ. ಬಿಡುಗಡೆಯಾಗಿದ್ದು, ಒಂದು ವಾರದೊಳಗೆ ಇದರ ಪ್ರಕ್ರಿಯೆ ಪ್ರಾರಂಭಿಸಲು ಸೂಚಿಸಲಾಗಿದೆ. ರಾಜ್ಯದಲ್ಲೇ ಪ್ರಥಮ ಬಾರಿಗೆ ಈ ಕೋರ್ಸ್ ಶಿಮ್ಸ್ನಲ್ಲಿ ಪ್ರಾರಂಭಿಸಲಾಗುತ್ತಿದೆ ಎಂದರು.
ನರ್ಸ್, ಟೆಕ್ನಿಷಿಯನ್ ಮತ್ತಿತರ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡುವ ಪ್ರಕ್ರಿಯೆ ತಕ್ಷಣ ಆರಂಭಿಸಲು ಸೂಚಿಸಲಾಗಿದೆ. ಎಮರ್ಜೆನ್ಸಿ ಮೆಡಿಸಿನ್ ಮತ್ತು ಜಿರಿಯಾಟ್ರಿಕ್ ವಿಭಾಗವನ್ನು ಪ್ರಾರಂಭಿಸಲು ತಕ್ಷಣ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿದೆ ಎಂದು ಹೇಳಿದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






