ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 17 FEBRUARY 2021
ಮೆಗ್ಗಾನ್ ಆಸ್ಪತ್ರೆ ಸ್ಟಾಫ್ ನರ್ಸ್, ಹೊರಗುತ್ತಿಗೆ ನೌಕರರ ನಿಯೋಗ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ತಮ್ಮ ಸೇವೆ ಖಾಯಂಗೊಳಿಸಬೇಕು ಎಂದು ಮನವಿ ಮಾಡಿದರು.
ಶಿವಮೊಗ್ಗದ ಪ್ರವಾಸಿ ಮಂದಿರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾದ ನಿಯೋಗ, ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ 140 ಮೆಡಿಕಲ್ ಮತ್ತು ಕ್ಲಿನಿಕಲ್ ಸ್ಟಾಫ್ ಸಿಬ್ಬಂದಿ ಕಾರ್ಯಾಚರಿಸುತ್ತಿದ್ದಾರೆ. ಮೆಗ್ಗಾನ್ ಆಸ್ಪತ್ರೆಯ ನಿರ್ವಹಣೆಗೆ ತಮ್ಮ ಸೇವೆ ತುಂಬಾ ಅಗತ್ಯವಿದೆ. ಹಾಗಾಗಿ ತಮ್ಮನ್ನು ಖಾಯಂಗೊಳಿಸಬೇಕು ಎಂದು ಮನವಿ ಮಾಡಿದರು.
ಸುಮಾರು 13 ವರ್ಷದಿಂದ ಮೆಗ್ಗಾನ್ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ನಿಯೋಗ ಮನವಿ ಸಲ್ಲಿಸಿತು. ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಯಡಿಯೂರಪ್ಪ, ಅಧಿಕಾರಿಗಳ ಜೊತೆ ಚರ್ಚೆಸಿ ಮುಂದಿನ ನಿರ್ಧಾರ ಪ್ರಕಟಿಸುವುದಾಗಿ ಭರವಸೆ ನೀಡಿದರು.
ಸಂಸದ ಬಿ.ವೈ.ರಾಘವೇಂದ್ರ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

- ಉಪನ್ಯಾಸಕ ಸುರೇಶ್ ನಿಗೂಢ ಸಾವು ಕೇಸ್, ಶಿವಮೊಗ್ಗ SP ಫಸ್ಟ್ ರಿಯಾಕ್ಷನ್, ಏನಂದ್ರು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

- ಟಾಟಾ ಏಸ್, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

- ಮೀನು ಮಾರುಕಟ್ಟೆ ಬಳಿ ಕಿರಿಕ್, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು
















