ಶಿವಮೊಗ್ಗ ಸಿಟಿಯಲ್ಲಿ ಒಂದು ದಿನ ಮಾಂಸ ಮಾರಾಟ ನಿಷೇಧ, ಯಾವಾಗ? ಯಾಕೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಸೆಪ್ಟೆಂಬರ್ 4 ರಂದು ಶಿವಮೊಗ್ಗ ಸಿಟಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಿ ಮಹಾನಗರ ಪಾಲಿಕೆ ಆದೇಶಿಸಿದೆ.

Shimoga-Mahanagara-Palike-ambedkar-statue

ಮಾಂಸ ಮಾರಾಟದ ಉದ್ದಿಮೆದಾರರು ಅಂದು ತಮ್ಮ ಅಂಗಡಿಗಳನ್ನು ಕಡ್ಡಾಯವಾಗಿ ಮುಚ್ಚಿ, ಮಾಂಸ ಮಾರಾಟ ಸಂಪೂರ್ಣ ಸ್ಥಗಿತಗೊಳಿಸಬೇಕು. ಒಂದು ವೇಳೆ ಈ ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಪರಿಸರ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಎಚ್ಚರಿಕೆ ನೀಡಿದ್ದಾರೆ.