ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 3 JANUARY 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ರಾಜ್ಯೋತ್ಸವ, ಪ್ರತಿಭಾ ಪುರಸ್ಕಾರ, ಸನ್ಮಾನ
SHIMOGA : ವರ್ಷಿಣಿ ಯೋಗ ಶಿಕ್ಷಣ ಮತ್ತು ಸಾಂಸ್ಕೃತಿಕ, ಕ್ರೀಡಾ ಟ್ರಸ್ಟ್ ನಿಂದ ಕರ್ನಾಟಕ ರಾಜ್ಯೋತ್ಸವ ಮತ್ತು ಪ್ರತಿಭಾ ಪುರಸ್ಕಾರ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ. ಜ. 7ರಂದು ವಾಸವಿ ಶಾಲೆಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಪಿ.ಪಂಚಲಯ್ಯ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕ ಕಲ್ಯಾಣಾಧಿಕಾರಿ ಶಿಲ್ಪಾ ಎಂ. ದೊಡ್ಡಮನಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ವಿವಿಧ ಇಲಾಖೆ ಅಧಿಕಾರಿಗಳು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮಕ್ಕ ಆಗಮಿಸಲಿದ್ದಾರೆ. ಸಂಜೆ 5 ಗಂಟೆಗೆ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ವಿವಿಧ ಕ್ಷೇತ್ರದ ಗಣ್ಯರನ್ನು ಸನ್ಮಾನಿಸಲಾಗುತ್ತದೆ ಎಂದು ತಿಳಿಸಿದರು.
ಶಿವಮೊಗ್ಗದಲ್ಲಿ ಆರ್‌ಟಿಒ ಸಭೆ
SHIMOGA : ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರ ನಿರ್ದೇಶನದಂತೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜ.4 ರಂದು ಬೆಳಿಗ್ಗೆ 11 ಗಂಟೆಗೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ಆಯೋಜಿಸಲಾಗಿದೆ. ಶಿವಮೊಗ್ಗ ನಗರ ವ್ಯಾಪ್ತಿಯ ಆಟೋರಿಕ್ಷಾಗಳಿಗೆ ಪರವಾನಿಗೆ ವಿಷಯ ಹಾಗೂ ಇತರೆ ಸಂಗತಿಗಳ ಕುರಿತು ಚರ್ಚಿಸಲಾಗುತ್ತದೆ ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಎಳ್ಳಮಾವಾಸ್ಯೆ ಜಾತ್ರೆ, ತೀರ್ಥಹಳ್ಳಿಯಲ್ಲಿ ಸಂಗ್ರಹವಾಗಲಿದೆ ಹೊರೆ ಕಾಣಿಕೆ, ನಾಲ್ಕು ವಾಹನಗಳಿಗೆ ಸಿಕ್ತು ಚಾಲನೆ