ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 10 ಜನವರಿ 2022
ಶಿವಮೊಗ್ಗದ ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಗೆ ಕರೋನ ಭೀತಿ ಎದುರಾಗಿದೆ. ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಜಾತ್ರೆಗಳನ್ನು ರದ್ದುಗೊಳಿಸಬೇಕು ಎಂದು ಸರ್ಕಾರ ಸೂಚಿಸಿದೆ.
ಈ ಹಿನ್ನೆಲೆಯಲ್ಲಿ ಇವತ್ತು ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನ ಸಮಿತಿಯ ಸಾಮಾನ್ಯ ಸಭೆ ನಡೆಸಲಾಯಿತು. ಜಾತ್ರೆ ಕುರಿತು ಮಹತ್ವದ ಚರ್ಚೆ ನೆಡಸಲಾಯಿತು.
ರದ್ದಾಗಿಲ್ಲ, ಮುಂದೂಡುವುದು ಬೇಡ
ಕರೋನ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜಾತ್ರೆಯನ್ನು ರದ್ದುಗೊಳಿಸಬೇಕೋ, ಮುಂದೂಡಬೇಕೋ ಎಂಬ ಕುರಿತು ಚರ್ಚೆ ನಡೆಸಲಾಯಿತು. ಜಾತ್ರೆಯನ್ನು ಯಾವುದೆ ಕಾರಣಕ್ಕೂ ರದ್ದುಗೊಳಿಸಬಾರದು. ಅಲ್ಲದೆ ಮುಂದೂಡುವುದು ಬೇಡ. ಈಗಾಗಲೇ ನಿಗದಿಯಾಗಿರುವ ದಿನಾಂಕದಂದೆ ಜಾತ್ರೆ ನಡೆಸಬೇಕು ಎಂದು ತೀರ್ಮಾನಿಸಲಾಯಿತು.
ಯಾವಾಗ ನಡೆಯಲಿದೆ ಜಾತ್ರೆ?
ಈ ಭಾರಿಯ ಕೋಟೆ ಮಾರಿಕಾಂಬ ದೇವಿ ಜಾತ್ರೆಯು 2022ರ ಫೆಬ್ರವರಿ 22 ರಿಂದ ಫೆಬ್ರವರಿ 26ರವರೆಗೆ ನಡೆಯಲಿದೆ. ಐದು ದಿನ ವಿಜೃಂಭಣೆಯಿಂದ ಜಾತ್ರೆ ನಡೆಸಲು ತೀರ್ಮಾನಿಸಲಾಗಿದೆ. ಸಿದ್ಧತೆಗಳನ್ನು ಕೂಡ ಆರಂಭಿಸಲಾಗಿದೆ.
ಸರ್ಕಾರದ ಸೂಚನೆ ಬಳಿಕ ಮುಂದಿನ ಕ್ರಮ
ಪೂರ್ವ ನಿಗದಿಯಂತೆ ಜಾತ್ರೆ ನಡೆಸಲು ತೀರ್ಮಾನಿಸಲಾಗಿದೆ. ಒಂದು ವೇಳೆ ಸರ್ಕಾರ ಸೂಚನೆ ನೀಡಿದರೆ ಜಾತ್ರೆ ರದ್ದುಗೊಳಿಸುವುದು ಅಥವಾ ಮುಂದೂಡುವ ಕುರಿತು ತೀರ್ಮಾನಿಸಲಾಗುತ್ತದೆ ಎಂದು ಸಮಿತಿ ತಿಳಿಸಿದೆ.
ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಯನ್ನು ಮುಂದೂಡಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆದರೆ ಜಾತ್ರೆ ರದ್ದಾಗಿಲ್ಲ, ಮುಂದೂಡಲ್ಪಟ್ಟಿಲ್ಲ ಎಂದು ಸಮಿತಿ ತಿಳಿಸಿದೆ.
shimoga, s
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422