ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಅಕ್ಟೋಬರ್ 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಮಾರ್ಗವನ್ನು ಹಿರಿಯ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದೆ. ಅಲ್ಲದೆ ಈ ಮಾರ್ಗದ ಕುರಿತು ಸಂಪೂರ್ಣ ಮಾಹಿತಿ ಪಡೆದಿದೆ.
ರೈಲ್ವೆ ಇಲಾಖೆ ಅಧಿಕಾರಿಗಳ ತಂಡವು ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಮಾರ್ಗವನ್ನು ಪರಿಶೀಲನೆ ನಡೆಸಿತು. ರೈಲ್ವೆ ಮಾರ್ಗದ ಭೂ ಸ್ವಾಧೀನ ಮತ್ತು ಸ್ಥಳೀಯ ಸಮಸ್ಯೆಗಳ ಕುರಿತು ಮಾಹಿತಿ ಪಡೆಯಿತು. ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಭೇಟಿಯಾದ ಅಧಿಕಾರಿಗಳ ತಂಡವು ರೈಲ್ವೆ ಮಾರ್ಗದ ಕುರಿತು ಚರ್ಚೆ ನಡೆಸಿತು.
ಡಿಸೆಂಬರ್ ಕೊನೆಯ ವಾರ ಅಥವಾ ಜನವರಿಯಲ್ಲಿ ರೈಲ್ವೆ ಮಾರ್ಗದ ಕಾಮಗಾರಿ ಆರಂಭಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟರ್ಮಿನಲ್ ಬಿಲ್ಡಿಂಗ್ ತಾಂತ್ರಿಕ ವಿಚಾರ
ಇನ್ನು, ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಕುರಿತು ಅಧಿಕಾರಿಗಳ ತಂಡವೊಂದು ಸಂಸದ ಬಿ.ವೈ.ರಾಘವೇಂದ್ರ ಅವರೊಂದಿಗೆ ಚರ್ಚೆ ನಡೆಸಿತು. ರೈಟ್ಸ್ ಸಂಸ್ಥೆಯ ಅಧಿಕಾರಿಗಳು ಟರ್ಮಿನಲ್’ನ ತಾಂತ್ರಿಕ ಮಾಹಿತಿಯ ಕುರಿತು ಚರ್ಚಿಸಿದರು. ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವುದಾಗಿ ತಿಳಿಸಿದರು.
ರೈಟ್ಸ್ ಸಂಸ್ಥೆಯ ಹರಿಬಾಬು, ಜನರಲ್ ಮ್ಯಾನೇಜರ್ ಎಂ.ಜಿ.ಸುದೀಪ್, ಸೀನಿಯರ್ ಡಿಜಿಎಂ ಶ್ರೀನಿವಾಸ್, ಅಡಿಷನಲ್ ಜೆನರಲ್ ಮ್ಯಾನೇಜರ್ ಎಂ.ರಾಜು ಸೇರಿದಂತೆ ಹಲವು ಅಧಿಕಾರಿಗಳು ಇದ್ದರು.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






