ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 2 JANUARY 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಯುವ ನಿಧಿ ಯೋಜನೆಗೆ ಚಾಲನೆ ಕಾರ್ಯಕ್ರಮದ ಪೂರ್ವ ಸಿದ್ಧತೆ ಹಿನ್ನೆಲೆ ಸಚಿವರು, ಹಿರಿಯ ಅಧಿಕಾರಿಗಳು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ. ವಿವಿಧ ಸಭೆಗಳನ್ನು ಆಯೋಜಿಸುತ್ತಿದ್ದಾರೆ.
ಯಾರೆಲ್ಲ ಯಾವಾಗ ಭೇಟಿ ನೀಡ್ತಿದ್ದಾರೆ?
ಸಚಿವ ಡಾ. ಶರಣ ಪ್ರಕಾಶ್ ಆರ್.ಪಾಟೀಲ್ : ಜ.2ರಂದು ಸಂಜೆ 7.30ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. ಜ.3ರಂದು ಬೆಳಗ್ಗೆ 9.30ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಬೆಳಗ್ಗೆ 11.30ಕ್ಕೆ ಶಿವಮೊಗ್ಗ ಕಾಂಗ್ರೆಸ್ ಕಚೇರಿಗೆ ಭೇಟಿ, ಮಧ್ಯಾಹ್ನ 2.40ಕ್ಕೆ ಶಿವಮೊಗ್ಗದಿಂದ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಮಾಡಲಿದ್ದಾರೆ.
ಉಮಾ ಮಹಾದೇವನ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಕೆ ಅಪರ ಮುಖ್ಯ ಕಾರ್ಯದರ್ಶಿ : ಜ.2ರಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗಕ್ಕೆ ಆಗಮನ. ಜ.3ರಂದು ಬೆಳಗ್ಗೆ 9.30ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೂರ್ವಭಾವಿ ಸಭೆಯಲ್ಲಿ ಭಾಗಿ. ಮಧ್ಯಾಹ್ನ 2.40ಕ್ಕೆ ಶಿವಮೊಗ್ಗದಿಂದ ವಿಮಾನದಲ್ಲಿ ಬೆಂಗಳೂರಿಗೆ.
ಡಾ. ರಾಗಪ್ರಿಯಾ, ಆಯುಕ್ತರು, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ : ಜ.2ರಂದು ರಾತ್ರಿ 7 ಗಂಟೆಗೆ ಶಿವಮೊಗ್ಗಕ್ಕೆ ಆಗಮನ. ಜ.3ರಂದು ಬೆಳಗ್ಗೆ 9.30ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೂರ್ವಭಾವಿ ಸಭೆಯಲ್ಲಿ ಭಾಗಿ. ಮಧ್ಯಾಹ್ನ 2.40ಕ್ಕೆ ಶಿವಮೊಗ್ಗದಿಂದ ವಿಮಾನದಲ್ಲಿ ಬೆಂಗಳೂರಿಗೆ ತೆರಳಲಿದ್ದಾರೆ.
ಇದನ್ನೂ ಓದಿ – ಹೊಸ ವರ್ಷದಂದು 750 ಮಕ್ಕಳಿಂದ ಪೋಷಕರಿಗೆ ಪಾದಪೂಜೆ, ಶಿವಮೊಗ್ಗದಲ್ಲಿ ವಿಭಿನ್ನ ಕಾರ್ಯಕ್ರಮ