ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಜುಲೈ 2020
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜಿಲ್ಲೆಯಲ್ಲಿ ಕರೋನಾ ಸೋಂಕು ನಿಧಾನವಾಗಿ ಗ್ರಾಮೀಣ ಪ್ರದೇಶಕ್ಕೂ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಇನ್ನಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಶನಿವಾರ ಎಲ್ಲಾ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಮಾಲೋಚನಾ ಸಭೆ ಆಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಇವತ್ತು ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಕರೋನಾ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಉತ್ತಮ ಕ್ರಮಗಳನ್ನು ಕೈಗೊಳ್ಳಲಾಗಿದ್ದರೂ, ಕಳೆದ ಒಂದು ವಾರದಿಂದ ಕರೋನಾ ಪಾಸಿಟಿವ್ ಪ್ರಕರಣಗಳಲ್ಲಿ ಹೆಚ್ಚಳ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಜನರು ಸ್ವಯಂ ನಿಯಂತ್ರಣ ಕೈಗೊಳ್ಳುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಲಾಗುತ್ತಿದೆ.
ಸ್ವಯಂ ಲಾಕ್ ಡೌನ್ ಕುರಿತು ಚರ್ಚೆ
ವ್ಯಾಪಾರಿಗಳು, ವಾಣಿಜ್ಯೋದ್ಯಮಿಗಳು ಸೇರಿದಂತೆ ಸುಮಾರು 30 ಸಂಘ ಸಂಸ್ಥೆಗಳ 60 ಪ್ರತಿನಿಧಿಗಳನ್ನು ಸಭೆಗೆ ಕರೆಯಲಾಗಿದೆ. ಸ್ವಯಂ ಪ್ರೇರಿತರಾಗಿ ಭಾಗಶಃ ಲಾಕ್‍ಡೌನ್ ವಿಧಿಸುವುದು ಸೇರಿದಂತೆ ಎಲ್ಲಾ ಸಾಧ್ಯತೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.
ಅಂಗಡಿ ಮುಂಗಟ್ಟುಗಳನ್ನು ತೆರೆಯುವ ಅವಧಿಯನ್ನು ಸೀಮಿತಗೊಳಿಸುವುದು, ದಿನ ಬಿಟ್ಟು ದಿನ ಸಂಪೂರ್ಣ ಲಾಕ್‍ಡೌನ್ ಸೇರಿದಂತೆ ಎಲ್ಲಾ ಸಾಧ್ಯತೆಗಳನ್ನು ಸಭೆಯ ಮುಂದಿರಿಸಿ, ಸಭೆಯಲ್ಲಿ ಕೈಗೊಳ್ಳುವ ತೀರ್ಮಾನಕ್ಕೆ ಜಿಲ್ಲಾಡಳಿತ ಬದ್ಧವಾಗಿರುವುದು. ಯಾವುದೇ ಕಾರಣಕ್ಕೂ ಜಿಲ್ಲಾಡಳಿತ ಲಾಕ್‍ಡೌನ್ ಬಲವಂತವಾಗಿ ಹೇರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]