‘ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ಲಕ್ಷ ಸದಸ್ಯತ್ವದ ಟಾರ್ಗೆಟ್, ನ.19ರಿಂದ ಅಭಿಯಾನ ಶುರು’

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ನವೆಂಬರ್ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಹನ್ನೆರಡು ವರ್ಷದಿಂದ ಸ್ಥಗಿತವಾಗಿದ್ದ ಸದಸ್ಯತ್ವ ಅಭಿಯಾನವನ್ನು ಪುನಾರಂಭ ಮಾಡಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ಲಕ್ಷ ಹೊಸ ಸದಸ್ಯರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗುತ್ತದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಎಸ್.ಸುಂದರೇಶ್, ನವೆಂಬರ್ 14ರಂದು ಬೆಂಗಳೂರಿನಲ್ಲಿ ಸದಸ್ಯತ್ವ ಅಭಿಯಾನಕ್ಕೆ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಚಾಲನೆ ನೀಡಲಿದ್ದಾರೆ. ನವೆಂಬರ್ 19ರಂದು ಇಂದಿರಾ ಗಾಂಧಿ ಅವರ ಜನ್ಮದಿನದಂದು ಶಿವಮೊಗ್ಗದಲ್ಲಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಸಿಗಲಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ಲಕ್ಷ ಸದಸ್ಯತ್ವದ ಗುರಿ ಹೊಂದಿದ್ದೇವೆ ಎಂದು ತಿಳಿಸಿದರು.

ಗ್ರಾಮ ವಾಸ್ತವ್ಯ, ಜಾಗೃತಿಗಾಗಿ ಪಾದಯಾತ್ರೆ

ಇನ್ನು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವೈಫಲ್ಯ ಮತ್ತು ಬೆಲೆ ಏರಿಕೆ ವಿರುದ್ಧ ಗ್ರಾಮ ಪಂಚಾಯಿತಿ ಹಂತದಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಪಾದಯಾತ್ರೆಗಳನ್ನು ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ADVT JULY NANJAPPA HOSPITAL HOME LAB TESTING

ಮತ್ತೊಂದೆಡೆ ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಾತ್ರ ಮತ್ತು ಆ ಬಳಿಕ ಕಾಂಗ್ರೆಸ್ ಪಕ್ಷದ ಕೊಡುಗೆ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಲಿದೆ. ರಾಷ್ಟ್ರ ಮತ್ತು ರಾಜ್ಯಮಟ್ಟದ ನಾಯಕರು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ ಎಂದು ಹೆಚ್.ಎಸ್.ಸುಂದರೇಶ್ ತಿಳಿಸಿದರು.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment