ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 18 DECEMBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಬೆಂಗಳೂರಿನಿಂದ ಶಿವಮೊಗ್ಗದ ಮನೆಗೆ ಮರಳಿದವರಿಗೆ ಕಾದಿತ್ತು ಶಾಕ್
SHIMOGA : ಮನೆ ಮುಂದೆ ನಿಲ್ಲಿಸಿದ್ದ ಆಪ್ರಿಲ್ಲಾ ಸ್ಟ್ರೋಮ್ ಬೈಕ್ ಕಳ್ಳತನವಾಗಿದೆ ಎಂದು ಪ್ರವೀಣ್ ಎಂಬುವವರು ದೂರು ನೀಡಿದ್ದಾರೆ. ರವೀಂದ್ರನಗರದ 6ನೇ ಅಡ್ಡರಸ್ತೆಯಲ್ಲಿ ಘಟನೆ ಸಂಭವಿಸಿದೆ. ಪ್ರವೀಣ್ ಅವರು ಕುಟುಂಬದವರೊಂದಿಗೆ ಬೆಂಗಳೂರಿಗೆ ತೆರಳಿದ್ದರು. ಮನೆಗೆ ಹಿಂತಿರುಗಿದಾಗ ಬೈಕ್ ಕಳ್ಳತನವಾಗಿತ್ತು. ಎಲ್ಲೆಡೆ ಹುಡುಕಾಡಿದ ಪ್ರವೀಣ್ ಅವರು ಜಯನಗರ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಗಮನ ಬೇರೆಡೆ ಸೆಳೆದು 98 ಸಾವಿರ ರೂ. ಕಳ್ಳತನ
SHIMOGA : ಗಮನ ಬೇರೆಡೆ ಸೆಳೆದು 98 ಸಾವಿರ ರೂ. ಹಣ ಕಳ್ಳತನ ಮಾಡಲಾಗಿದೆ. ಶಿವಮೊಗ್ಗದ ಬಿ.ಹೆಚ್.ರಸ್ತೆಯ ಕೆನರಾ ಬ್ಯಾಂಕ್ ಮುಂಭಾಗ ಘಟನೆ ಸಂಭವಿಸಿದೆ. ಚಂದ್ರಾನಾಯ್ಕ್ ಎಂಬುವವರು ಬ್ಯಾಂಕ್‌ನಿಂದ ಹಣ ಡ್ರಾ ಮಾಡಿ ಪ್ಲಾಸ್ಟಿಕ್ ಕವರ್‌ನಲ್ಲಿಟ್ಟುಕೊಂಡು ತಂದಿದ್ದರು. ಬ್ಯಾಂಕ್ ಮುಂಭಾಗ ನಿಲ್ಲಿಸಿದ್ದ ತಮ್ಮ ಮೊಪೆಡ್ ವಾಹನದ ಡಿಕ್ಕಿಯಲ್ಲಿಟ್ಟಿದ್ದರು. ಆ ಹೊತ್ತಿಗೆ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಯೊಬ್ಬ ಕೆಳಗೆ ಹಣ ಬಿದ್ದಿದೆ ನೋಡಿ ಎಂದು ತಿಳಿಸಿದ. ಚಂದ್ರಾನಾಯ್ಕ್ ಅವರು ಕೆಳಗೆ ನೋಡುವ ಹೊತ್ತಿಗೆ ಪಕ್ಕದಲ್ಲಿದ್ದ ವ್ಯಕ್ತಿ ನಾಪತ್ತೆಯಾಗಿದ್ದ. ಡಿಕ್ಕಿಯನ್ನು ಪರಿಶೀಲಿಸಿದಾಗ ಹಣದ ಕವರ್ ಇರಲಿಲ್ಲ. ಘಟನೆ ಸಂಬಂಧ ಕೋಟೆ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಠಾಣೆಗೆ ಮನವಿ
SHIMOGA : ಮನೆ ಮುಂದೆ ಬಳಿ ನಿಲ್ಲಿಸಿದ್ದ ವಾಹನಗಳಿಗೆ ಹಾನಿ, ಮದ್ಯ ಸೇವಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ 1ನೇ ವಾರ್ಡ್ ನಿವಾಸಿಗಳ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ವಿನೋಬನಗರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್‌ಗೆ ಮನವಿ ಸಲ್ಲಿಸಲಾಯಿತು. ಅರವಿಂದ ನಗರ ಮುಖ್ಯ ರಸ್ತೆಯಲ್ಲಿ ನಿತ್ಯ ಕಿಡಿಗೇಡಿಗಳಿಂದ ಸಮಸ್ಯೆಯಾಗುತ್ತಿದೆ. ಕೂಡಲೆ ತಪ್ಪಿತಸ್ಥರ ವಿರುದ್ಧ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಸಂಘದ ಅಧ್ಯಕ್ಷ ತಂಗರಾಜು, ಈಶ್ವರ್ ಬೊಮ್ಮನಕಟ್ಟೆ, ಮಂಜುನಾಥ್, ಸಂತೋಷ್, ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದನ್ನೂ ಓದಿ – ಶಿವಮೊಗ್ಗ ಬೈಪಾಸ್ ರಸ್ತೆಯಲ್ಲಿ ಹೊಸ ಸೇತುವೆ ಉದ್ಘಾಟನೆ, ವಾಹನ ಸಂಚಾರ ಶುರು, ಹೇಗಿದೆ ಸೇತುವೆ?