ಶಿವಮೊಗ್ಗ ಸಿಟಿಯಲ್ಲಿ ಪದೇ ಪದೇ ವಿದ್ಯುತ್ ಕಡಿತ, ಕುಡಿಯುವ ನೀರಿಗೆ ಹಾಹಾಕಾರದ ಆತಂಕ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 MARCH 2021

ನಗರದಲ್ಲಿ ಪದೇ ಪದೇ ಕರೆಂಟ್ ಕಡಿತ ಮಾಡುತ್ತಿದ್ದು, ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದೆ. ಮೆಸ್ಕಾಂ ಅಧಿಕಾರಿಗಳು ಈ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಹೆಚ್.ಸಿ.ಯೋಗೀಶ್ ಅವರು ಮೆಸ್ಕಾಂ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ್ದಾರೆ.

ಶಿವಮೊಗ್ಗ ನಗರದಲ್ಲಿ ಮುನ್ಸೂಚನೆ ಇಲ್ಲದೆ ಪದೇ ಪದೇ ವಿದ್ಯುತ್ ಸಂಪರ್ಕ ಕಡಿತವಾಗುತ್ತಿದೆ. ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆ ಉಂಟಾಗುತ್ತಿದೆ. ಪ್ರಮುಖವಾಗಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿದೆ ಎಂದು ಆರೋಪಿಸಿದರು.

ಗಾಜನೂರು ಸಮೀಪದ ಪಂಪ್‌ಹೌಸ್‌ನಲ್ಲಿ ವಿದ್ಯುತ್ ಇಲ್ಲದಿದ್ದರೆ ಇಡೀ ನಗರಕ್ಕೆ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಮೆಸ್ಕಾಂ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು ಮತ್ತು ಅನಿಯಮಿತ ಲೋಡ್ ಶೆಡ್ಡಿಂಗನ್ನು ನಿಲ್ಲಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment