ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | CID | 28 ಏಪ್ರಿಲ್ 2022
ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ನೊಟೀಸ್ ನೀಡಿದ ಸಿಐಡಿ ಅಧಿಕಾರಿಯನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿ ಕೆಪಿಸಿಸಿ ವತಿಯಿಂದ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಪಿಎಸ್ಐ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಅವರನ್ನು ಬಂಧಿಸಲು ಸಿಐಡಿ ಅಧಿಕಾರಿಗಳು ವಿಫಲವಾಗಿದ್ದಾರೆ. ಅಕ್ರಮ ಬಯಲಿಗೆಳೆದ ಶಾಸಕ ಪ್ರಿಯಾಂಕ ಖರ್ಗೆ ಅವರಿಗೆ ನೋಟಿಸ್ ನೀಡಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿ ಸರ್ಕಾರ ರಚನೆಯಾದಾಗಿನಿಂದ ರಾಜ್ಯದಲ್ಲಿ ಅಕ್ರಮವಾಗಿ ಹಣ ಮಾಡುವ ಉದ್ದೇಶದಿಂದ ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗ ವ್ಯವಸ್ಥೆಯನ್ನು ಬುಡಮೇಲು ಮಾಡಲಾಗುತ್ತಿದೆ. ಸರ್ಕಾರಿ ಉದ್ಯೋಗಕ್ಕಾಗಿ ಅಭ್ಯರ್ಥಿಗಳು ಹಗಲು, ರಾತ್ರಿ ಕಷ್ಟಪಡುತ್ತಿದ್ದಾರೆ. ಆದರೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಕಾಂಕ್ಷಿಗಳ ಶ್ರಮ ಮಣ್ಣುಪಾಲಾಗುತ್ತಿದೆ. ತನ್ನ ಕಾರ್ಯಕರ್ತರಿಗೆ ಸರ್ಕಾರ ಹುದ್ದೆ ಕೊಡಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆಪಾದಿಸಿದರು.
ಪ್ರತಿಭಟನೆಯಲ್ಲಿ ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಕೆ.ದೇವೇಂದ್ರಪ್ಪ, ಪ್ರಮುಖರಾದ ರಾಘವೇಂದ್ರ, ಅರ್ಜುನ, ಶಿವಾನಂದ, ನಿಸಾರ್ ಅಹಮದ್, ಜಾನ್, ಭರತ್, ಕಾಶಿ, ಜಮೀಲ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಗಾಂಧಿ ಬಜಾರ್’ಗೆ ಹೋಗುತ್ತಿದ್ದ ಯುವಕನ ಮೇಲೆ ಬೈಕಲ್ಲಿ ಅಡ್ಡಾದಿಡ್ಡಿ ಬಂದವರಿಂದ ಹಲ್ಲೆ