ಶಿವಮೊಗ್ಗ: ನಗರದ ವಿವಿಧೆಡೆ ನಿಯಮ ಬಾಹಿರವಾಗಿ ಕಟ್ಟಡಗಳನ್ನು (Building) ನಿರ್ಮಿಸಲಾಗಿದೆ. ಆದರೆ ಮಹಾನಗರ ಪಾಲಿಕೆ ಅಧಿಕಾರಿಗಳು ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಮಿಕರ ವಿಭಾಗ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಕಾರ್ಯಾಧ್ಯಕ್ಷ ಎಂ.ಕುಮಾರ್, ಕೆಪಿಸಿಸಿ ಕಾರ್ಯದರ್ಶಿ ಕೆ.ದೇವೇಂದ್ರಪ್ಪ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮನವಿ ಸಲ್ಲಿಸಲಾಯಿತು.
ಮನವಿಯಲ್ಲಿ ಏನೇನೆಲ್ಲ ಇದೆ?
- ಲೈಸೆನ್ಸ್ ಪಡೆಯುವ ಸಂದರ್ಭ ನಿಗದಿಪಡಿಸಿದ್ದಕ್ಕಿಂತಲು ಹೆಚ್ಚಿನ ಅಂತಸ್ತಿನ ಕಟ್ಟಡ ನಿರ್ಮಿಸಲಾಗಿದೆ.
- ಸೆಟ್ ಬ್ಯಾಕ್, ಅಗ್ನಿಶಾಮಕ ವಾಹನ ತೆರಳಲು ಸೂಕ್ತ ಜಾಗ ಬಿಡದೆ ಕಟ್ಟಡ ನಿರ್ಮಾಣ ಮಾಡಲಾಗಿದೆ.
- ರಸ್ತೆಗಳು, ಚರಂಡಿಗಳನ್ನು ಒತ್ತುವರಿ ಮಾಡಲಾಗಿದೆ. ಅವುಗಳ ಮೇಲೆ ಮೆಟ್ಟಿಲುಗಳನ್ನು ನಿರ್ಮಿಸಲಾಗಿದೆ. ರಸ್ತೆಯಲ್ಲಿ ಬೋರ್ವೆಲ್, ಟ್ರಾನ್ಸ್‌ಫಾರ್ಮರ್ ಅಳವಡಿಸಲಾಗಿದೆ.
- ಸೂಕ್ತ ಪಾರ್ಕಿಂಗ್ ಸ್ಥಳವಿಲ್ಲದೆ ರಸ್ತೆ ಮೇಲೆ ವಾಹನ ನಿಲುಗಡೆ ಮಾಡಿ ಟ್ರಾಫಿಕ್ ಜಾಮ್ ಉಂಟು ಮಾಡುತ್ತಿದ್ದಾರೆ.

2004 ರಿಂದ 2024ರವರೆಗೆ ಕಟ್ಟಡಗಳಿಗೆ ನೀಡಿರುವ ಲೈಸೆನ್ಸ್ ಮತ್ತು ಪರವಾನಗಿ ನೀಡಿದ ಅಧಿಕಾರಿಗಳ ಆಸ್ತಿಪಾಸ್ತಿ ಪರಿಶೀಲಿಸಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಶಿವಮೊಗ್ಗ ನಗರ ಘಟಕ ಕಾರ್ಯಾಧ್ಯಕ್ಷೆ ಎನ್.ರೂಪ, ನವೀನ್ ಸೇರಿದಂತೆ ಹಲವರು ಈ ಸಂದರ್ಭ ಇದ್ದರು.
ಇದನ್ನೂ ಓದಿ » ಶಿವಮೊಗ್ಗದ ಸಿಟಿ ಸೆಂಟರ್ ಮಾಲ್ ಬಳಿ ಹೋಮ್ ಗಾರ್ಡ್ ಮೇಲೆ ಹಲ್ಲೆ, ಆಟೋ ಚಾಲಕ ಅರೆಸ್ಟ್, ಏನಿದು ಕೇಸ್?

LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





