ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಸೆಪ್ಟಂಬರ್ 2020
ಎಫ್‍ಡಿಎ, ಎಸ್‍ಡಿಎ ಅಭ್ಯರ್ಥಿಗಳ ನೇಮಕಾತಿ ಆದೇಶಕ್ಕೆ ಸರ್ಕಾರ ನೀಡಿರುವ ತಡೆಯನ್ನು ತೆರವು ಮಾಡಬೇಕು ಎಂದು ಒತ್ತಾಯಿಸಿ ನೊಂದ ಅಭ್ಯರ್ಥಿಗಳು ಮನವಿ ಸಲ್ಲಿಸಿದ್ದಾರೆ.
https://www.facebook.com/liveshivamogga/videos/1282508178762944/?t=0
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮನವಿ ಸಲ್ಲಿಸಿದ ಅಭ್ಯರ್ಥಿಗಳು, ಕರ್ನಾಟಕ ಲೋಕಸೇವಾ ಆಯೋಗದ 2017 -18ರ ಅಧಿಸೂಚನೆ ಅಡಿ ಆಯ್ಕೆಯಾದ ಎಫ್‍ಡಿಎ, ಎಸ್‍ಡಿಎ ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಯನ್ನು ತಡೆಹಿಡಿಯಲಾಗಿದೆ. ಈ ಆದೇಶವನ್ನು ಕೂಡಲೆ ತೆರವು ಮಾಡಬೇಕು ಎಂದು ಮನವಿ ಮಾಡಿದರು.
507 ಎಫ್‍ಡಿಎ, 551 ಎಸ್‍ಡಿಎ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಪರೀಕ್ಷೆ ನಡೆಸಿ, 2020ರ ಜನವರಿಯಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿತ್ತು. ಜುಲೈ ತಿಂಗಳಲ್ಲಿ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಆದರೆ ಕೋವಿಡ್ ಹಿನ್ನೆಲೆ, ಹಣಕಾಸು ಸಮಸ್ಯೆ ಇರುವುದರಿಂದ ನೇಮಕಾತಿಗೆ ತಡೆ ನೀಡಲಾಗಿದೆ.
ಹೀಗಿದ್ದು ಕೆಲವು ಇಲಾಖೆಗಳಿಗೆ ಇದೇ ಬ್ಯಾಚ್‍ನ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ. ಉಳಿದವರಿಗೂ ಕೂಡಲೆ ನೇಮಕಾತಿ ಆದೇಶ ನೀಡುವಂತೆ ಅಭ್ಯರ್ಥಿಗಳು ಮನವಿ ಮಾಡಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422