ಶಿವಮೊಗ್ಗ ಲೈವ್.ಕಾಂ | SHIMOGA NEWS | 19 MARCH 2021
ಬಿಸಿಲಿನ ಧಗೆ ಹೆಚ್ಚಾಗಿರುವುದರಿಂದ ಹೆಲ್ಮೆಟ್ ಧರಿಸಲು ವಿನಾಯಿತಿ ನೀಡಬೇಕೆಂದು ಒತ್ತಾಯಿಸಿ ರಾಜ್ಯ ನಾಗರೀಕ ರಕ್ಷಣಾ ಸಮಿತಿ ವತಿಯಿಂದ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಲಾಯಿತು.
ಶಿವಮೊಗ್ಗ ನಗರದಲ್ಲಿ ಬಿಸಿಲಿನ ಧಗೆ ದಿನೇ ದಿನೇ ಹೆಚ್ಚುತ್ತಿದೆ. ಆದ್ದರಿಂದ ಜನಸಾಮಾನ್ಯರು ಪರದಾಡುವಂತಾಗಿದೆ. ಬಿಸಿಲು ಇರುವ ಸಂದರ್ಭದಲ್ಲಿ ಹೆಲ್ಮೆಟನ್ನು ಧರಿಸಿರುವಾಗ ಅಲರ್ಜಿ ಸೇರಿದಂತೆ ನಾನಾ ಸಮಸ್ಯೆಗಳು ಹೆಚ್ಚಾಗುತ್ತಿವೆ ಹಾಗೂ ಹಿರಿಯ ನಾಗರೀಕರು ಬಿಸಿಲಿನಲ್ಲಿ ಹೆಲ್ಮೆಟ್ ಧಾರಣೆ ಮಾಡಿ ಪ್ರಯಾಣಿಸುವಾಗ ತಲೆಸುತ್ತು ಬರುವಂತಹ ಸಮಸ್ಯೆಗಳು ಹೆಚ್ಚಾಗುತ್ತಿವೆ ಎಂದು ತಿಳಿಸಿದರು.
ದೂರ ಪ್ರಯಾಣ ಮಾಡುವ ಸ್ಥಳಗಳಲ್ಲಿ ಹೆಲ್ಮೆಟ್ ಪರಿಶೀಲನೆ ಮುಂದುವರಿಸಿ ನಗರ ವ್ಯಾಪ್ತಿಗಳಲ್ಲಿ ಹೆಲ್ಮೆಟ್‍ಗೆ ವಿನಾಯಿತಿ ನೀಡಬೇಕು. ಹೆಲ್ಮೆಟ್ ತಪಾಸಣೆ ಬದಲಾಗಿ ವೇಗ ಮಿತಿಯನ್ನು ಪರಿಶೀಲಿಸಲು ಸೂಚಿಸಬೇಕು ಎಂದು ಮನವಿ ಮಾಡಿದರು.
ರಾಜ್ಯ ನಾಗರಿಕರ ರಕ್ಷಣಾ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ರಾಘವೇಂದ್ರ, ಗೌರವಾಧ್ಯಕ್ಷ ಲಕ್ಷ್ಮೀಕಾಂತ, ಉಪಾಧ್ಯಕ್ಷ ಕೆ ಶೇಖರ್, ಸಹ ಕಾರ್ಯದರ್ಶಿ ವಿನೋದ್, ಶಂಭುಲಿಂಗ, ಹರೀಶ್, ಮಲ್ಲೇಶಪ್ಪ, ಕುಬೇರ,ಷಣ್ಮುಖ ಇದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]