ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
[su_label type=”important”]SHIVAMOGGA LIVE NEWS[/su_label]
ಶಿವಮೊಗ್ಗ | ಸ್ಮಾಟ್ ಸಿಟಿ (SMART CITY) ಕಾಮಗಾರಿ ಸಂಪೂರ್ಣ ಸರಿ ಆಗುವವರೆಗೆ ಪಿ.ಎಂ.ಸಿ.(ಪ್ರಾಜೆಕ್ಟ್ ಮ್ಯಾನೇಜ್ ಮೆಂಟ್ ಕನ್ಸಲ್ಟೆನ್ಸಿ) ಯವರಿಗೆ ಹಣ ಬಿಡುಗಡೆ ಮಾಡಬಾರದು ಎಂದು ಒತ್ತಾಯಿಸಿ ಮಹಾನಗರ ಪಾಲಿಕೆ ವಿಪಕ್ಷ ನಾಯಕಿ ರೇಖಾ ರಂಗನಾಥ್ ನೇತೃತ್ವದಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಪಿಎಂಸಿಗೆ ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ 26 ಕೋಟಿ 95 ಲಕ್ಷ ರೂ. ಮಂಜೂರಾಗಿದೆ. ಈಗಾಗಲೇ 17 ಕೋಟಿ 92 ಲಕ್ಷ ರೂ ಹಣವನ್ನು ನೀಡಲಾಗಿದೆ. ಸ್ಮಾರ್ಟ್ ಸಿಟಿ ಕಾಮಗಾರಿಯು ಪೂರ್ಣಗೊಳ್ಳುವ ತನಕ ಮುಂದಿನ ಹಣ ಬಿಡುಗಡೆ ಮಾಡಬಾರದು ಎಂದು ಮನವಿ ಮಾಡಿದರು.
ಶಿವಮೊಗ್ಗ ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಅತ್ಯಂತ ಕಳಪೆಯಾಗಿದೆ. ಪ್ರತಿ ವರ್ಷ ಮಳೆ ನೀರು ಮನೆಗಳಿಗೆ, ಅಂಗಡಿಗಳಿಗೆ ನೀರು ನುಗ್ಗುತ್ತಿದೆ. ಇದರಿಂದ ಸಾರ್ವಜನಿಕರಿಗೆ ಮೇಲಿಂದ ಮೇಲೆ ತೊಂದರೆ ಆಗುತ್ತಿದೆ ಎಂದು ಆರೋಪಿಸಿದರು.
[su_quote cite=”ರೇಖಾ ರಂಗನಾಥ್, ಪಾಲಿಕೆ ವಿರೋಧ ಪಕ್ಷದ ನಾಯಕಿ”]ಕಾಮಗಾರಿ ಮೇಲ್ವಿಚಾರಣೆ ನೋಡುತ್ತಿರುವ

ಪಿ.ಎಂ.ಸಿ. ಯವರಿಗೆ ಒಟ್ಟು ಕಾಮಗಾರಿಯ ಬಿಲ್ ನಲ್ಲಿ ಶೇಕಡವಾರು ಅನುಪಾತದಲ್ಲಿ 17 ಕೋಟಿ 92 ಲಕ್ಷ ರೂಪಾಯಿ ಬಿಡುಗಡೆ ಮಾಡಲಾಗಿದೆ. ಇಷ್ಟು ಹಣ ಪಡೆದಿರುವ ಪಿ.ಎಂ.ಸಿ.ಯವರು, ಮಳೆ ನೀರು ನುಗ್ಗಿದ ಸಂದರ್ಭ ತಮ್ಮ ಪಾತ್ರವೇನು ಎಂಬುದು ತಿಳಿಸಿಲ್ಲ. ಇವರಿಗೆ ಕೊಡುವ ಹಣ ವ್ಯರ್ಥ.[/su_quote]
ಆಗಿರುವ ಅನಾಹುತಕ್ಕೆ ಪಿ.ಎಂ.ಸಿ. ಯವರು ಸಹ ನೇರವಾದ ಕಾರಣ. ಆದ್ದರಿಂದ ಕಾಮಗಾರಿಯು ಸಂಪೂರ್ಣ ಸರಿ ಆಗುವ ತನಕ ಪಿ.ಎಂ.ಸಿ. ಅವರಿಗೆ ಯಾವುದೇ ಹಣ ಬಿಡುಗಡೆ ಮಾಡಬಾರದು. ಇವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸ್ಮಾರ್ಟ್ ಸಿಟಿ (SMART CITY) ಕಾಮಗಾರಿ ನಡೆಯುವ ವಾರ್ಡ್ ಗಳ ಸಭೆಯನ್ನು ಕರೆದಿಲ್ಲ. ತಮ್ಮ ನೇತೃತ್ವದಲ್ಲಿ ತುರ್ತಾಗಿ ಸ್ಮಾರ್ಟ್ ಸಿಟಿ ಕಾಮಗಾರಿ ಮಾಡುತ್ತಿರುವ ವಾರ್ಡ್ ಸದಸ್ಯರ ಸಭೆಯನ್ನು ಕರೆಯಬೇಕಾಗಿ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಹೆಚ್.ಸಿ. ಯೋಗೇಶ್, ನಾಗರಾಜ್ ಕಂಕಾರಿ, ಮಾಜಿ ಉಪ ಮೇಯರ್ ಹೆಚ್. ಪಾಲಾಕ್ಷಿ, ಕಾಂಗ್ರೆಸ್ ಮುಖಂಡರಾದ ಕೆ. ರಂಗನಾಥ್, ಎಂ. ಪ್ರವೀಣ್ ಕುಮಾರ್, ಹೆಚ್.ಪಿ. ಗಿರೀಶ್, ಬಿ. ಲೋಕೇಶ್, ಎಸ್.ಕುಮಾರೇಶ್, ರಂಗೇಗೌಡ, ಮೋಹನ್ ಇತರರು ಇದ್ದರು
ಇದನ್ನೂ ಓದಿ – ಸಾಮಾನ್ಯ ಗೃಹಿಣಿ ಈಗ ಶಿವಮೊಗ್ಗ ಪಾಲಿಕೆಯ ವಿರೋಧ ಪಕ್ಷದ ನಾಯಕಿ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















