ಶಿವಮೊಗ್ಗ: ಗಾಂಧಿ ಬಜಾರ್ನಲ್ಲಿ ಫುಟ್ಪಾತ್ ವ್ಯಾಪಾರಿಗಳು ಹಾಗೂ ತಳ್ಳುಗಾಡಿಗಳಿಂದ ಅಂಗಡಿ ವ್ಯಾಪಾರಕ್ಕೆ ತೊಂದರೆಯಾಗುತ್ತಿದೆ. ಸಂಚಾರ ದಟ್ಟಣೆ ಉಂಟಾಗುತ್ತಿದೆ. ಹೀಗಾಗಿ ಗಾಂಧಿ ಬಜಾರ್ನಲ್ಲಿ ಫುಟ್ಪಾತ್ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂದು ಗಾಂಧಿ ಬಜಾರ್ ವರ್ತಕರ ಸಂಘ ಜಿಲ್ಲಾಡಳಿತಕ್ಕೆ ಒತ್ತಾಯಿಸಿದೆ. (ಈ ಸುದ್ದಿಯನ್ನು ಇನ್ನು 50 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಈ ಕುರಿತು ಶುಕ್ರವಾರ ಮನವಿ ಸಲ್ಲಿಸಿರುವ ಸಂಘದ ಅಧ್ಯಕ್ಷ ವಿಜಯಕುಮಾರ್ ದಿನಕರ್, ಈ ಹಿಂದೆ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತರ ಸಭೆಯಲ್ಲಿ ಗಾಂಧಿ ಬಜಾರ್ನಲ್ಲಿ ಫುಟ್ಪಾತ್ ವ್ಯಾಪಾರ ಮತ್ತು ತಳ್ಳು ಗಾಡಿಗಳಿಗೆ ಅವಕಾಶ ನೀಡದಿರಲು ನಿರ್ಧರಿಸಿ, ಪರ್ಯಾಯ ಸ್ಥಳಗಳನ್ನು ಗುರುತಿಸಲಾಗಿತ್ತು. ಆದರೆ, ಹಬ್ಬಗಳ ಸಂದರ್ಭ ಮೂರು ದಿನ ಮುಂಚಿತವಾಗಿ ವ್ಯಾಪಾರಕ್ಕೆ ಅವಕಾಶ ನೀಡಲಾಗುತ್ತಿದೆ ಎಂದು ದೂರಿದರು.

ಅಂಗಡಿಗಳ ಮುಂದೆ ಬೀದಿ ಬದಿ ವ್ಯಾಪಾರಿಗಳು ವ್ಯಾಪಾರ ನಡೆಸುವುದರಿಂದ ಗ್ರಾಹಕರ ಓಡಾಟಕ್ಕೆ ತೊಂದರೆಯಾಗುತ್ತಿದೆ. ಸಂಚಾರ ದಟ್ಟಣೆ ಹೆಚ್ಚುವುದರ ಜತೆಗೆ ಅಂಗಡಿ ಮಾಲೀಕರೊಂದಿಗೆ ವಾಗ್ವಾದವೂ ನಡೆಯುತ್ತಿದೆ. ಲಕ್ಷಾಂತರ ರೂಪಾಯಿ ಬಂಡವಾಳ ಹೂಡಿ, ಬಾಡಿಗೆ ಹಾಗೂ ತೆರಿಗೆ ಪಾವತಿಸುವ ವರ್ತಕರು ಹಬ್ಬದ ಸಂದರ್ಭ ವ್ಯಾಪಾರವಿಲ್ಲದೆ ನಷ್ಟ ಅನುಭವಿಸುವಂತಾಗಿದೆ ಎಂದು ತಿಳಿಸಿದ್ದಾರೆ.
ಫುಟ್ಪಾತ್ ವ್ಯಾಪಾರಿಗಳು ಹಾಗೂ ತಳ್ಳುಗಾಡಿಗಳಿಗೆ ಗಾಂಧಿಬಜಾರ್ನಲ್ಲಿ ಅವಕಾಶ ನೀಡದೆ, ಅವರಿಗೆ ಸೂಕ್ತ ಪರ್ಯಾಯ ಸ್ಥಳ ಕಲ್ಪಿಸಬೇಕು. ಇಲ್ಲವಾದಲ್ಲಿ ವರ್ತಕರು ಹೋರಾಟ ನಡೆಸಲಿದ್ದಾರೆ ಎಂದು ಎಚ್ಚರಿಸಿದ್ದಾರೆ.