ಗ್ರಾಮ ಆಡಳಿತ ಅಧಿಕಾರಿ ಹುದ್ದೆ, ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟ, ದಾಖಲೆ ಪರಿಶೀಲನೆಗೆ ದಿನಾಂಕ ನಿಗದಿ

ಶಿವಮೊಗ್ಗ: ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 18 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 1:3 ಅನುಪಾತದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಡಿಸೆಂಬರ್ 7 ಮತ್ತು 8 ರಂದು ನಡೆಯಲಿದೆ. (ಈ ಸುದ್ದಿಯನ್ನು ಇನ್ನು 32 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಅರ್ಹ 51 ಅಭ್ಯರ್ಥಿಗಳ ಪಟ್ಟಿಯನ್ನು ಜಿಲ್ಲಾ ವೆಬ್‌ಸೈಟ್‌ನಲ್ಲಿ https://shivamogga.nic.in ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ತಮ್ಮ ಮೀಸಲಾತಿ ಹಾಗೂ ವಿದ್ಯಾರ್ಹತೆಯ ಮೂಲ ಪ್ರಮಾಣಪತ್ರಗಳೊಂದಿಗೆ ಬೆಳಿಗ್ಗೆ 11 ರಿಂದ ಸಂಜೆ 5 ಗಂಟೆಯೊಳಗೆ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಖುದ್ದಾಗಿ ಹಾಜರಾಗಬೇಕು.

himoga-DC-office-and-Police-jeep-in-front-of-office

ಗೈರುಹಾಜರಾದವರಿಗೆ ಎರಡನೇ ಅವಕಾಶ ನೀಡುವುದಿಲ್ಲ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ಮೆರಿಟ್ ಆಧಾರದಲ್ಲಿ ಈ ಪಟ್ಟಿ ಸಿದ್ಧಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ನೇಮಕಾತಿ ಆಯ್ಕೆ ಸಮಿತಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: