ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 3 MAY 2021
ಕರೋನ ನಿಯಂತ್ರಣಕ್ಕೆ ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ನಗರದ ವಿವಿಧೆಡೆ ಸ್ಯಾನಿಟೈಸ್ ಮಾಡಲಾಗುತ್ತಿದೆ. ಈ ನಡುವೆ ಭಾನುವಾರ ಎಂಟು ಮೈಕ್ರೊ ಕಂಟೈನ್ಮೆಂಟ್ ಜೋನ್‍ಗಳನ್ನು ಸ್ಥಾಪಿಸಲಾಗಿದೆ
ನಗರದ ಪ್ರಮುಖ ರಸ್ತೆಗಳು, ಜನನಿಬಿಡ ಪ್ರದೇಶಗಳಲ್ಲಿ ಭಾನುವಾರ ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ. ಸ್ಯಾನಿಟೈಸರ್ ಟ್ಯಾಂಕ್ ಹೊತ್ತ ವಾಹನದಲ್ಲಿ ಸ್ಯಾನಿಟೈಸ್ ಮಾಡಲಾಗಿದೆ.
ಮೈಕ್ರೋ ಕಂಟೈನ್ಮೆಂಟ್ ಜೋನ್
ಭಾನುವಾರ ನಗರದಾದ್ಯಂತ ಎಂಟು ಮೈಕ್ರೊ ಕಂಟೈನ್ಮೆಂಟ್ ಜೋನ್‍ಗಳನ್ನು ಸ್ಥಾಪಿಸಲಾಗಿದೆ. ಕೆಎಸ್‍ಆರ್‍ಟಿಸಿ ಲೇಔಟ್, ಕರಿಯಣ್ಣ ಬಿಲ್ಡಿಂಗ್ ಸಮೀಪ, ಎಲ್‍ಐಸಿ ಕ್ವಾರ್ಟರ್ಸ್ ಸಮೀಪ, ಮೆಡಿಕಲ್ ಕಾಲೇಜು ಹಾಸ್ಟೆಲ್, ವೆಟರ್ನರಿ ಕಾಲೇಜು ರಂಗನಾಥ ದೇವಸ್ಥಾನದ ಬಳಿ, ಆರ್‍ಎಂಎಲ್ ನಗರದಲ್ಲಿ ಒಂದೆಡೆ ಮೈಕ್ರೊ ಕಂಟೈನ್ಮೆಂಟ್ ಜೋನ್ ರಚಿಸಲಾಗಿದೆ.
ಸಣ್ಣ ಪ್ರಮಾಣದಲ್ಲಿ ಸೋಂಕಿತರು ಒಂದೆ ಮನೆ ಅಥವಾ ಅಕ್ಕಪಕ್ಕದ ಮನೆಯಲ್ಲಿ ಇದ್ದರೆ ಅಂತಹ ಪ್ರದೇಶವನ್ನು ಮೈಕ್ರೊ ಕಂಟೈನ್ಮೆಂಟ್ ಜೋನ್ ಎಂದು ಘೋಷಿಸಲಾಗುತ್ತದೆ. ಇನ್ನು, ಅಧಿಕ ಸಂಖ್ಯೆಯಲ್ಲಿ ಸೋಂಕಿತರು ಕಾಣಿಸಿಕೊಂಡರೆ ರಸ್ತೆಯನ್ನೇ ಸೀಲ್ ಡೌನ್ ಮಾಡಲಾಗುತ್ತದೆ.
ನೀವಿನ್ನೂ ಕರೋನ ಲಸಿಕೆ ಪಡೆದಿಲ್ಲವಾ? ಕೂಡಲೆ ಕೆಳಗಿರುವ ಫೋಟೊದಲ್ಲಿನ ನಂಬರ್‍ಗೆ ಕರೆ ಮಾಡಿ, ಸುರಕ್ಷಿತವಾಗಿ ಲಸಿಕೆ ಪಡೆಯಿರಿ

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





