ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 2 JULY 2024
SHIMOGA : ಜಿಲ್ಲಾ ಉಸ್ತುವಾರಿ ಸಚಿವ (Minister) ಮಧು ಬಂಗಾರಪ್ಪ ಸೂಚನೆ ಮೇರೆಗೆ ಸೋಮಿನಕೊಪ್ಪ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆ ಮಕ್ಕಳಿಗೆ ಶನಿವಾರದಿಂದಲೇ ಸರ್ಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆಯಿಂದ ಮಧ್ಯಾಹ್ನ ಬಿಸಿಯೂಟ ಕಲ್ಪಿಸಲಾಗುತ್ತಿದೆ.
ಶುಕ್ರವಾರ ಕುವೆಂಪು ರಂಗಮಂದಿರದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಬಿಸಿಯೂಟ ನೀಡುತ್ತಿಲ್ಲ ಎಂದು ಸಚಿವ ಮಧು ಬಂಗಾರಪ್ಪ ಅವರಿಗೆ ಮಕ್ಕಳು ದೂರಿದ್ದರು. ಈ ಮೊದಲು ಶಾಲೆಯು ಲಷ್ಕರ್ ಮೊಹಲ್ಲಾದಲ್ಲಿತ್ತು. ಕಳೆದೊಂದು ವರ್ಷದಿಂದ ಸೋಮಿನಕೊಪ್ಪದ ಸ್ವಂತ ಕಟ್ಟಡಕ್ಕೆ ಸ್ಥಳಾಂತರಗೊಂಡಿದೆ. ಆದರೆ ಅಲ್ಲಿ ಮಧ್ಯಾಹ್ನದ ಬಿಸಿಯೂಟದ ವ್ಯವಸ್ಥೆ ಇರಲಿಲ್ಲ ಎಂದು ವಿದ್ಯಾರ್ಥಿಗಳು ದೂರಿದ್ದರು.

ಸೋಮವಾರದಿಂದಲೇ ಮೌಲಾನಾ ಆಜಾದ್ ಮಾದರಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಕಲ್ಪಿಸುವಂತೆ ಜಿಲ್ಲಾಧಿಕಾರಿ ಮತ್ತು ಸಂಬಂಧಿಸಿದ ಇಲಾಖೆ ಅಧಿಕಾರಿಗೆ ಸಚಿವರು ಸೂಚಿಸಿದ್ದರು. ಹಾಗಾಗಿ ಶಿಕ್ಷಣ ಇಲಾಖೆ ಮರು ದಿನದಿಂದಲೇ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ವ್ಯವಸ್ಥೆ ಮಾಡಿದೆ.
ಇದನ್ನೂ ಓದಿ – ತುಂಗಾ ಮೇಲ್ದಂಡೆ ಯೋಜನೆ ನಾಲೆಗಳಿಗೆ ನಾಳೆಯಿಂದ ನೀರು
LATEST NEWS
- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

- ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

- ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

- ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು















