ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | ATTACK | 12 ಮೇ 2022
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮೆಗ್ಗಾನ್ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ಡ್ಯೂಟಿ ಡಾಕ್ಟರ್ ಇಲ್ಲದಿರುವನ್ನು ಖಂಡಿಸಿ ಮೆಗ್ಗಾನ್ ಆಸ್ಪತ್ರೆ ಮುಂಭಾಗ ದಿಢೀರ್ ಪ್ರತಿಭಟನೆ ನಡೆಸಲಾಯಿತು. ತೀರ್ಥಹಳ್ಳಿಯ ಯುವ ಕಾಂಗ್ರೆಸ್ ಮುಖಂಡ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತೀರ್ಥಹಳ್ಳಿ ಯುವ ಕಾಂಗ್ರೆಸ್ ಮುಖಂಡ ಪೂರ್ಣೇಶ್ ಕೆಳಕೆರೆ ಅವರು ದಿಢೀರ್ ಪ್ರತಿಭಟನೆ ನಡೆಸಿದರು. ತುರ್ತು ಚಿಕಿತ್ಸೆ ಅಗತ್ಯವಿದ್ದರೂ ವೈದ್ಯರಿಲ್ಲ ಎಂಬ ಕಾರಣಕ್ಕೆ ಚಿಕಿತ್ಸೆ ನೀಡದೆ ಗಂಟೆಗಟ್ಟಲೆ ಕಾಯಿಸಿದ್ದಾರೆ. ಇದರಿಂದ ಆಕ್ರೋಶಗೊಂಡು ಪೂರ್ಣೇಶ್ ಕೆಳಕೆರೆ ಅವರು ಪ್ರತಿಭಟನೆ ನಡೆಸಿದರು.
ಏನಿದು ಪ್ರಕರಣ?
ತೀರ್ಥಹಳ್ಳಿಯ ಕೆಳಕೆರೆ ಗ್ರಾಮದ ಪ್ರವೀಣ್ ಎಂಬುವವರ ಮೇಲೆ ಹಲ್ಲೆಯಾಗಿತ್ತು. ತಲೆಗೆ ತೀವ್ರ ಪೆಟ್ಟು ಬಿದ್ದು ರಕ್ತಸ್ರಾವ ಉಂಟಾಗಿತ್ತು. ಈ ಹಿನ್ನೆಲೆ ಪ್ರವೀಣ್ ಅವರನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರಿಂದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಯಿತು.
ಗಾಯಾಳು ಪ್ರವೀಣ್ ಅವರನ್ನು ರಾತ್ರಿ ಮೆಗ್ಗಾನ್ ಆಸ್ಪತ್ರೆಗೆ ಕರೆ ತರಲಾಯಿತು. ಆದರೆ ಎರಡು ಗಂಟೆ ಕಳೆದರೂ ಡ್ಯೂಟಿ ಡಾಕ್ಟರ್ ಇಲ್ಲ ಎಂದು ಚಿಕಿತ್ಸೆ ಸಿಗಲಿಲ್ಲ ಎಂಬ ಆಪಾದನೆ ಕೇಳಿ ಬಂದಿದೆ. ಗಾಯಾಳುವನ್ನು ಎರಡು ಗಂಟೆ ವೀಲ್ ಚೇರ್ ಮೇಲೆಯೆ ಕೂರಿಸಲಾಗಿದೆ ಎಂದು ಆರೋಪಿಸಲಾಗಿದೆ.
ಕೊಠಡಿಯಲ್ಲಿ ಬೆಡ್ ಇಲ್ಲ
ಇನ್ನು, ಮೆಡಿಕಲ್ ವಿದ್ಯಾರ್ಥಿಗಳಿಂದ ಚಿಕಿತ್ಸೆ ಕೊಡಿಸಿ ವಾರ್ಡ್’ಗೆ ರವಾನಿಸಲಾಗಿದೆ. ಆದರೆ ವಾರ್ಡ್’ನಲ್ಲಿ ಬೆಡ್ ಖಾಲಿ ಇರಲಿಲ್ಲ. ಇದರಿಂದ ಕೆರಳಿದ ಯುವ ಕಾಂಗ್ರೆಸ್ ಮುಖಂಡ ಪೂರ್ಣೇಶ್ ಕೆಳಕೆರೆ ಅವರು ಮೆಗ್ಗಾನ್ ಆಸ್ಪತ್ರೆ ಮುಂಭಾಗ ದಿಢೀರ್ ಪ್ರತಿಭಟನೆ ನಡೆಸಿದರು.
ಇಡೀ ರಾತ್ರಿ ಪ್ರತಿಭಟನೆ ನಡೆಸಿದರೂ ವೈದ್ಯರು ಬರಲಿಲ್ಲ ಎಂದು ಆರೋಪಿಸಲಾಗಿದೆ. ಮೆಗ್ಗಾನ್ ಆಸ್ಪತ್ರೆಯ ಸೆಕ್ಯೂರಿಟಿಗಳು, ಡ್ಯೂಟಿಯಲ್ಲಿರುವ ಪೊಲೀಸ್ ಸಿಬ್ಬಂದಿ ಪ್ರತಿಭಟನೆ ಕೈಬಿಡುವಂತೆ ಏರು ಧ್ವನಿಯಲ್ಲಿ ಮಾತನಾಡಿದ್ದು ಹೊರುತು ಮತ್ತಿನ್ಯಾರು ಸ್ಥಳಕ್ಕೆ ಬಂದಿಲ್ಲ ಎಂದು ಆರೋಪಿಸಲಾಗಿದೆ.
ಇದೇ ಮೊದಲಲ್ಲ
ಮೆಗ್ಗಾನ್ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ಡ್ಯೂಟಿ ಡಾಕ್ಟರ್’ಗಳು ಕರ್ತವ್ಯ ನಿರ್ವಹಣೆ ಕುರಿತು ಹಲವು ರೋಗಿಗಳು, ಅವರ ಸಂಬಂಧಿಗಳು ಆರೋಪಿಸಿದ್ದಾರೆ. ತುರ್ತು ಸಂದರ್ಭವಿದ್ದರೂ ರಾತ್ರಿ ಹೊತ್ತಲ್ಲಿ ಡ್ಯೂಟಿ ಡಾಕ್ಟರ್’ಗಳು ಇರುವುದಿಲ್ಲ. ವೈದ್ಯಕೀಯ ವಿದ್ಯಾರ್ಥಿಗಳಿಂದ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂಬ ಆಪಾದನೆ ಇದೆ. ಇಷ್ಟಾದರೂ ಮೆಗ್ಗಾನ್ ಆಸ್ಪತ್ರೆ ಆಡಳಿತ ಮಂಡಳಿ ಕ್ರಮ ಕೈಗೊಳ್ಳದಿರುವುದು ಜನಾಕ್ರೋಶಕ್ಕೆ ಕಾರಣವಾಗಿದೆ.
ಇದನ್ನೂ ಓದಿ – BREAKING | ಮಹತ್ವದ ಬೆಳವಣಿಗೆಯಲ್ಲಿ ದೆಹಲಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ