SHIVAMOGGA LIVE NEWS, 31 JANUARY 2024
ಶಿವಮೊಗ್ಗ : ಹಾಲು (Milk) ಉತ್ಪಾದಕರಿಗೆ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕಟವು (ಶಿಮುಲ್) ಶುಭ ಸುದ್ದಿ ನೀಡಿದೆ. ಇವತ್ತು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಹಾಲು ಖರೀದಿ ದರ ಪರಿಷ್ಕರಣೆ ಮಾಡಲಾಗಿದೆ. ಪ್ರತಿ ಕೆ.ಜಿ. ಹಾಲು ಖರೀದಿ ದರವನ್ನು 2 ರೂ. ಹೆಚ್ಚಳ ಮಾಡಲಾಗಿದೆ.
ಶಿವಮೊಗ್ಗ ಲೈವ್
ಮಾಚೇನಹಳ್ಳಿಯಲ್ಲಿರುವ ಶಿಮುಲ್ ಕೇಂದ್ರ ಕಚೇರಿಯಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿಯಲ್ಲಿ ಹಾಲು ಖರೀದಿ ದರ ಹೆಚ್ಚಳದ ನಿರ್ಧಾರ ಮಾಡಲಾಗಿದೆ.
ಪ್ರತಿ ಲೀಟರ್ಗೆ ಎಷ್ಟಾಗಲಿದೆ ದರ?
» ಪ್ರಸ್ತುತ ಶಿವಮೊಗ್ಗ ಹಾಲು ಒಕ್ಕೂಟದಿಂದ ಹಾಲು ಉತ್ಪಾದಕರ ಸಂಘಗಳಿಗೆ ಪ್ರತಿ ಕೆ.ಜಿ ಹಾಲಿಗೆ 32.09 ರೂ. ನೀಡಲಾಗುತ್ತಿದೆ. ಸಂಘದಿಂದ ಹಾಲು ಉತ್ಪಾದಕರಿಗೆ ಪ್ರತಿ ಕೆ.ಜಿ. ಹಾಲಿಗೆ 30.13 ರೂ. ನೀಡಲಾಗುತ್ತಿದೆ.
» ಫೆ.1ರಿಂದ ಹಾಲು ಖರೀದಿ ದರ ಪ್ರತಿ ಕೆ.ಜಿ.ಗೆ 2 ರೂ. ಹೆಚ್ಚಳ ಮಾಡಲಾಗಿದೆ. ಆದ್ದರಿಂದ ಒಕ್ಕೂಟದಿಂದ ಸಂಘಗಳಿಗೆ ಪ್ರತಿ ಕೆ.ಜಿ. ಹಾಲಿಗೆ 34.18 ರೂ. ನೀಡಲಾಗುತ್ತದೆ. ಸಂಘಗಳು ಹಾಲು ಉತ್ಪಾದಕರಿಗೆ ಪ್ರತಿ ಕೆ.ಜಿ.ಗೆ 32.22 ರೂ. ನೀಡಲಿದೆ ಎಂದು ಶಿಮುಲ್ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
» ಪರಿಷ್ಕೃತ ದರವು ಫೆ.1ಕ್ಕೆ ಜಾರಿಗೆ ಬರಲಿದೆ. ಮಾರ್ಚ್ 31ರವರೆಗೆ ಜಾರಿಯಲ್ಲಿರಲಿದೆ ಎಂದು ತಿಳಿಸಲಾಗಿದೆ.
ಶಿಮುಲ್ ಅಧ್ಯಕ್ಷ ಹೆಚ್.ಎನ್.ವಿಧ್ಯಾದರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಉಪಾಧ್ಯಕ್ಷ ಚೇತನ್ ಎಸ್.ನಾಡಿಗರ, ನಿರ್ದೇಶಕರು, ಡಿಆರ್ಸಿಎಸ್ ಸಹಕಾರ ಸಂಘಗಳ ಜಂಟಿ ನಿಬಂಧಕರ ಪ್ರತಿನಿಧಿ ನಾಗಭೂಷಣ್, ಕರ್ನಾಟಕ ಹಾಲು ಮಹಾಮಂಡಳಿಯ ನಿರ್ದೇಶಕ ರಾಜಶೇಖರ್ ಮೂರ್ತಿ, ಪಶು ಸಂಗೋಪನ ಇಲಾಖೆಯ ಅಧಿಕಾರಿಗಳು, ಶಿಮುಲ್ ವ್ಯವಸ್ಥಾಪಕ ನಿರ್ದೇಶಕ ಎಸ್.ಜಿ.ಶೇಖರ್ ಸಭೆಯಲ್ಲಿದ್ದರು.
ಇದನ್ನೂ ಓದಿ » ಶಿವಮೊಗ್ಗಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾರ್ಯಕರ್ತರಿಂದ ಹೂ ಮಳೆಯ ಸ್ವಾಗತ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200