ಶಿವಮೊಗ್ಗದಲ್ಲಿ ನೂತನ ಆಡಳಿತ ಸೌಧಕ್ಕೆ ಒತ್ತಾಯ, ಮಿನಿಸ್ಟರ್‌ ಭೇಟಿಯಾದ ಚೇತನ್‌ ಗೌಡ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

NEWS HIGHLIGHTS

ಶಿವಮೊಗ್ಗ: ಸರ್ಕಾರಿ ಕಚೇರಿಗಳನ್ನು ಒಂದೇ ಸೂರಿನಡಿ ತರುವ ನೂತನ ಆಡಳಿತ ಸೌಧ ನಿರ್ಮಾಣಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್ ಕೆ. ಗೌಡ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು.

➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿದ ಅವರು, ಜಿಲ್ಲಾಧಿಕಾರಿ ಕಚೇರಿಯಿಂದ ಸರ್ಕಾರಕ್ಕೆ ಸಲ್ಲಿಕೆಯಾಗಿರುವ ಸವಿಸ್ತಾರ ಯೋಜನಾ ವರದಿ (ಡಿಪಿಆರ್) ಹಾಗೂ ಪೂರಕ ದಾಖಲೆಗಳ ಪ್ರತಿಗಳನ್ನು ಹಸ್ತಾಂತರಿಸಿದರು.

Chethan-Gowda-submits-memorandum-to-Minister-Sathish-Jarakiholi

ನಗರದ ಹಲವು ಪ್ರಮುಖ ಸರ್ಕಾರಿ ಕಚೇರಿಗಳು ಸದ್ಯ ಖಾಸಗಿ ಕಟ್ಟಡಗಳಲ್ಲಿ ಬಾಡಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿವೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗುತ್ತಿದೆ. ವಿವಿಧೆಡೆ ಹಂಚಿಹೋಗಿರುವ ಕಚೇರಿಗಳಿಂದಾಗಿ ಸಾರ್ವಜನಿಕರು ಹಾಗೂ ರೈತರು ಅಲೆದಾಡುವಂತಾಗಿದೆ. ಮುಖ್ಯ ಬಸ್ ನಿಲ್ದಾಣದಿಂದ ಕೇವಲ 500 ಮೀಟರ್ ದೂರದಲ್ಲಿ ನೂತನ ಆಡಳಿತ ಸೌಧಕ್ಕೆ ಜಾಗ ಗುರುತಿಸಲಾಗಿದೆ. ಇದರಿಂದ ಜನಸಾಮಾನ್ಯರಿಗೆ ಅನುಕೂಲವಾಗಲಿದೆ ಎಂದು ಸಚಿವರಿಗೆ ಮನವರಿಕೆ ಮಾಡಿಕೊಟ್ಟರು. ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಚೇತನ್‌ ಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭ ರಾಜ್ಯ ಎಸ್ಸಿ–ಎಸ್ಟಿ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!