ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಸೆಪ್ಟಂಬರ್ 2020
ಪೌರ ಕಾರ್ಮಿಕರಿಗೆ ಮತ್ತು ಸಫಾಯಿ ಕರ್ಮಚಾರಿಗಳಿಗೆ ಕನಿಷ್ಟ ವೇತನ ನೀಡದೆ ವಂಚಿಸುವ ಹೊರಗುತ್ತಿಗೆ ಸಂಸ್ಥೆಗಳನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು.
ಶಿವಮೊಗ್ಗ ಲೈವ್.ಕಾಂ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಫಾಯಿ ಕರ್ಮಚಾರಿಗಳ ಕಲ್ಯಾಣ ಕಾರ್ಯಕ್ರಮಗಳ ಕುರಿತಾದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಕನಿಷ್ಟ ವೇತನ ನೀಡದಿರುವ ಕುರಿತು ದೂರುಗಳು ಬಂದಿರುವ ತಾಲೂಕುಗಳಲ್ಲಿ ಪರಿಶೀಲನೆ ನಡೆಸಿ, ದೂರುಗಳು ಸತ್ಯವಾಗಿದ್ದರೆ ಅಂತಹ ಹೊರಗುತ್ತಿಗೆ ಸಂಸ್ಥೆಗಳನ್ನು ಕಪ್ಪುಪಟ್ಟಿಗೆ ಸೇರಿಸಿ ಕಾನೂನು ಕ್ರಮ ಜರುಗಿಸುವಂತೆ ಜಿಲ್ಲಾ ಕಾರ್ಮಿಕ ಕಲ್ಯಾಣ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು. ಕಾರ್ಮಿಕರ ಹಿಂದಿನ ತಿಂಗಳ ಇಪಿಎಫ್ ಪಾವತಿಸಿರುವ ಕುರಿತಾದ ದಾಖಲೆಗಳನ್ನು ಸಲ್ಲಿಸಿದ ಬಳಿಕ ಮಾತ್ರ ಗುತ್ತಿಗೆ ಸಂಸ್ಥೆಗಳಿಗೆ ವೇತನ ಅನುದಾನ ಬಿಡುಗಡೆ ಮಾಡಬೇಕು ಎಂದು ಅವರು ಸ್ಪಷ್ಟಪಡಿಸಿದರು.
ಸಕ್ಕಿಂಗ್, ಜೆಟ್ಟಿಂಗ್ ಯಂತ್ರ ಬಳಕೆ ಕಡ್ಡಾಯ
ಎಲ್ಲಾ ಸ್ಥಳೀಯ ಸಂಸ್ಥೆಗಳು ಕಡ್ಡಾಯವಾಗಿ ಸಕ್ಕಿಂಗ್ ಮತ್ತು ಜೆಟ್ಟಿಂಗ್ ಯಂತ್ರವನ್ನು ಬಳಸಬೇಕು. ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಈ ಯಂತ್ರಗಳು ಉತ್ತಮ ಸ್ಥಿತಿಯಲ್ಲಿರಬೇಕು. ಯಾವುದೇ ಕಾರಣಕ್ಕೂ ಸಫಾಯಿ ಕರ್ಮಚಾರಿಗಳಿಂದ ಮ್ಯಾನ್ಹೋಲ್ಗಳನ್ನು ಸ್ಚಚ್ಛಗೊಳಿಸಬಾರದು ಎಂದು ಅವರು ತಾಕೀತು ಮಾಡಿದರು. ಎಂಪಿಎಂ ಮತ್ತು ವಿಎಸ್ಐಎಲ್ ನಲ್ಲಿ ಈಗಲೂ ಸಿಬ್ಬಂದಿಗಳಿಂದ ಮ್ಯಾನವಲ್ ಸ್ಕ್ಯಾವೆಂಜಿಂಗ್ ಮಾಡಲಾಗುತ್ತಿದೆ ಎಂಬ ದೂರಿನ ಬಗ್ಗೆ ಪರಿಶೀಲನೆ ನಡೆಸಬೇಕು. ಸದರಿ ಸಂಸ್ಥೆಗಳು ನಗರ ಸ್ಥಳೀಯ ಸಂಸ್ಥೆಗಳಿಂದ ಸಕ್ಕಿಂಗ್ ಮತ್ತು ಜೆಟ್ಟಿಂಗ್ ಯಂತ್ರದ ಸಹಾಯ ಪಡೆದಿರುವ ಬಗ್ಗೆ ಮಾಹಿತಿಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು.
ಸುರಕ್ಷತಾ ಪರಿಕರಗಳ ಬಳಕೆ ಖಾತ್ರಿಪಡಿಸಿಕೊಳ್ಳಬೇಕು
ಕರೋನಾ ಆರಂಭವಾದ ಬಳಿಕ ಹಲವು ಸ್ಥಳೀಯ ಸಂಸ್ಥೆಗಳಲ್ಲಿ ಸಫಾಯಿ ಕರ್ಮಚಾರಿಗಳ ಪೂರ್ಣ ಪ್ರಮಾಣದ ಆರೋಗ್ಯ ತಪಾಸಣೆ ನಡೆಸಲಾಗಿಲ್ಲ. ಹಂತ ಹಂತವಾಗಿ ಬ್ಯಾಚ್ ಮಾಡಿ ಎಲ್ಲರ ಆರೋಗ್ಯ ತಪಾಸಣೆಯನ್ನು ಪ್ರತಿ ಮೂರು ತಿಂಗಳಿಗೊಮ್ಮೆ ನಡೆಸಬೇಕು. ಸುರಕ್ಷತಾ ಪರಿಕರಗಳನ್ನು ಪೌರ ಕಾರ್ಮಿಕರು ಮತ್ತು ಸಫಾಯಿ ಕರ್ಮಚಾರಿಗಳು ಬಳಸುತ್ತಿರುವುದನ್ನು ಸಹ ಖಾತ್ರಿಪಡಿಸಬೇಕು ಎಂದರು.
ಗೃಹಭಾಗ್ಯ ಯೋಜನೆಯಡಿ ಮನೆ
ಗೃಹಭಾಗ್ಯ ಯೋಜನೆಯಡಿ ಎಲ್ಲಾ ಪೌರಕಾರ್ಮಿಕರಿಗೆ ಮತ್ತು ಸಫಾಯಿ ಕರ್ಮಚಾರಿಗಳಿಗೆ ಮನೆಯನ್ನು ಒದಗಿಸಬೇಕಾಗಿದೆ. ಮನೆಗಳ ನಿರ್ಮಾಣ ಕುರಿತಾಗಿ ತೀರ್ಥಹಳ್ಳಿ ಸ್ಥಳೀಯ ಸಂಸ್ಥೆಯ ಪ್ರಸ್ತಾಪವನ್ನು ಆದಷ್ಟು ಬೇಗನೆ ಅಂತಿಮಗೊಳಿಸಬೇಕು. ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 168 ಪೌರಕಾರ್ಮಿಕರಿಗೆ ಜಿ2 ಮಾದರಿಯಲ್ಲಿ ಮನೆ ನಿರ್ಮಿಸಲು ಟೆಂಡರ್ ಆಹ್ವಾನಿಸಲಾಗಿದೆ. ಟೆಂಡರ್ ಪ್ರಕ್ರಿಯೆ ಆದಷ್ಟು ಬೇಗನೇ ಪೂರ್ಣಗೊಳಿಸಿ ಮನೆಗಳ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಬೇಕು. ಭದ್ರಾವತಿಯಲ್ಲಿ 5 ಜನ ಪೌರಕಾರ್ಮಿಕರಿಗೆ ವೈಯಕ್ತಿಕ ಮನೆಗಳನ್ನು ಮತ್ತು 74 ಮಂದಿಗೆ ಜಿ3 ಮಾದರಿ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಇದನ್ನು ಸಹಾ ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಂಜುನಾಥ್, ಸಮಿತಿ ಸದಸ್ಯರು, ವಿವಿಧ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]