ಶಿವಮೊಗ್ಗ ಲೈವ್.ಕಾಂ | SHIMOGA NEWS | 26 JUNE 2021
ಶಿವಮೊಗ ನಗರದ ಪರಿಸರ ಸೂಕ್ಷ್ಮ ಪ್ರದೇಶವಾಗಿರುವ ರಾಗಿಗುಡ್ಡಿದಲ್ಲಿ ಅಕ್ರಮವಾಗಿ ಮಣ್ಣು ಗಣಿಗಾರಿಕೆ ನಡೆಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪರಿಸರ ಆಸಕ್ತರು ಆಗ್ರಹಿಸಿದ್ದಾರೆ. ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಏನಾಗ್ತಿದೆ ರಾಗಿಗುಡ್ಡದಲ್ಲಿ ?
ರಾಗಿಗುಡ್ಡದಲ್ಲಿ ಇಎಸ್ಐ ಆಸ್ಪತ್ರೆ ನಿರ್ಮಾಣಕ್ಕೆ 5.38 ಎಕರೆ ಜಾಗವನ್ನು ಗುರುತಿಸಲಾಗಿದೆ. ಈ ಜಾಗದಲ್ಲಿ 40 – 50 ಅಡಿಯಷ್ಟು ಆಳದವರೆಗೆ ಅಗೆದು ಮಣ್ಣು ತೆಗೆಯಲಾಗಿದೆ. ಸಾವಿರಾರು ಲೋಡ್ ಮಣ್ಣನ್ನು ಎಲ್ಲಿಗೆ ಸಾಗಿಸಲಾಗಿದೆ ಎಂಬುದು ಯಾರಿಗೂ ಗೊತ್ತಿಲ್ಲ. ಜಿಲ್ಲಾಡಳಿತ ಮಣ್ಣು ಗಣಿಗಾರಿಕೆಗೆ ಅನುಮತಿ ನೀಡಿರುವುದು ಸರಿಯಾದ ಕ್ರಮವಲ್ಲ. ಕಾನೂನು ಬಾಹಿರ ಕೆಲಸಕ್ಕೆ ಜಿಲ್ಲಾಡಳಿತ ಮೌನ ಸಮ್ಮತಿ ನೀಡಿರುವುದು ಅಕ್ಷಮ್ಯ ಎಂದು ಆರೋಪಿಸಿದರು.
ಉತ್ತರ ಕೊಡಲಿ ಜಿಲ್ಲಾಡಳಿತ
ವಾಹನ ಸೌಕರ್ಯವಿಲ್ಲದ ಸ್ಥಳದಲ್ಲಿ ಇಎಸ್ಐ ಆಸ್ಪತ್ರೆ ನಿರ್ಮಾಣಕ್ಕೆ ಜಾಗ ನೀಡಿದ್ದೇಕೆ? ಶಿವಮೊಗ್ಗ – ಭದ್ರಾವತಿ ನಡುವೆ ಇಎಸ್ಐ ಆಸ್ಪತ್ರೆ ನಿರ್ಮಾಣವಾಗಿದ್ದರೆ ಹೆಚ್ಚು ಅನುಕೂಲವಾಗುತ್ತಿರಲಿಲ್ಲವೇ? ರಾಗಿಗುಡ್ಡದಲ್ಲಿ ಇಇಸ್ಐ ಆಸ್ಪತ್ರೆಗೆ ಜಾಗ ಗುರುತಿಸುವಾಗ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲಾಯಿತೇ?
40 ಅಡಿ ಆಳದವರೆಗೆ ಮಣ್ಣು ತೆಗೆದಿರುವುದು ಕಾನೂನುಬಾಹಿರವಲ್ಲವೆ? ಇದರಿಂದ ಗುಡ್ಡದಲ್ಲಿ ಅಸಮತೋಲನ ಉಂಟಾಗುವುದಿಲ್ಲವೆ? ಆಸ್ಪತ್ರೆಗಾಗಿ 5.38 ಎಕರೆ ಜಾಗದಲ್ಲಿ ಅಷ್ಟೂ ಮಣ್ಣು ತೆರವು ಮಾಡುವ ಅವಶ್ಯಕತೆ ಇತ್ತಾ? ಇಲ್ಲಿಂದ ಸಾವಿರಾರು ಲೋಡ್ ಮಣ್ಣನ್ನು ಎಲ್ಲಿಗೆ ಸಾಗಿಸಲಾಗಿದೆ? ಇದರಿಂದ ಜಿಲ್ಲಾಡಳಿತದ ಬೊಕ್ಕಸಕ್ಕೆ ಎಷ್ಟು ಹಣ ಬಂದಿದೆ? ಎಂದು ಪರಿಸರ ಆಸಕ್ತರು ಪ್ರಶ್ನೆ ಮಾಡಿದ್ದಾರೆ.
ಕಾವು ಪಡೆಯುತ್ತಿದೆ ಹೋರಾಟ
ರಾಗಿಗುಡ್ಡದಲ್ಲಿ ಮಣ್ಣು ಗಣಿಗಾರಿಕೆ ನಡೆಸಿದ್ದನ್ನು ವಿರೋಧಿಸಿ ಆನ್ ಲೈನ್ ಮೂಲಕ ಮನವಿ, ಚಳವಳಿ ನಡೆಸಲಾಗುತ್ತಿತ್ತು. ಈಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗಿದೆ. ಇದಕ್ಕೆ ಕಡಿವಾಣ ಬೀಳದಿದ್ದರೆ ಮತ್ತಷ್ಟು ಹೋರಾಟವನ್ನು ಎದುರಿಸಬೇಕಾಗಲಿದೆ ಎಂದು ಪರಿಸರ ಆಸಕ್ತರು ಎಚ್ಚರಿಕೆ ನೀಡಿದ್ದಾರೆ.
ಪ್ರಮುಖರಾದ ಕೆ.ವಿ.ವಸಂತಕುಮಾರ್, ಡಾ. ಸತೀಶ್ ಕುಮಾರ್ ಶೆಟ್ಟಿ, ಎಸ್.ಬಿ.ಅಶೋಕ್ ಕುಮಾರ್, ನವ್ಯಶ್ರೀ ನಾಗೇಶ್, ಪುಷ್ಪಾ ಶೆಟ್ಟಿ, ಹೊಳೆಮಡಿಲು ವೆಂಕಟೇಶ್ ಸೇರಿದಂತೆ ಹಲವರು ಇದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ಇಂತಹ ಘಟನೆಗಳು ನಿಮ್ಮೂರಲ್ಲಿ ನಡೆದರೆ ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ಇಂತಹ ಘಟನೆಗಳು ನಿಮ್ಮೂರಲ್ಲಿ ನಡೆದರೆ ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200