ಶಿವಮೊಗ್ಗದ ಮಾಚೇನಹಳ್ಳಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ, ಶೀಘ್ರ ಕ್ಲಸ್ಟರ್‌ ಸ್ಥಾಪನೆಯ ಘೋಷಣೆ

ಶಿವಮೊಗ್ಗ: ಮಾಚೇನಹಳ್ಳಿ ಕೈಗಾರಿಕಾ ವಲಯಕ್ಕೆ (Industrial Area) ಕೇಂದ್ರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಇಂದು ಬೆಳಗ್ಗೆ ಭೇಟಿ ನೀಡಿದ್ದರು. ಕೈಗಾರಿಕೋದ್ಯಮಿಗಳು, ಕಾರ್ಮಿಕರ ಜೊತೆ ಮಾತನಾಡಿದರು.

ವೇದಿಕೆ ಕಾರ್ಯಕ್ರಮದಲ್ಲಿ ಕೈಗಾರಿಕೋದ್ಯಮಿಗಳು, ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಅಭಿನಂದನೆ ಸಲ್ಲಿಸಿದ್ದರು.

ಮಿನಿಸ್ಟರ್‌ ಏನೆಲ್ಲ ಹೇಳಿದರು?

ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವೆ ಶೋಭಾ ಕರಂದ್ಲಾಜೆ, ಶಿವಮೊಗ್ಗದಲ್ಲಿ ಕ್ಲಸ್ಟರ್‌ ಸ್ಥಾಪನೆ ಕುರಿತು ಮಾತನಾಡಿದರು. ಸಚಿವರ ಭಾಷಣದ ಪ್ರಮುಖಾಂಶಗಳು ಇಲ್ಲಿವೆ.

#f1f1f1 - POINT 1₹2.5 ಕೋಟಿಗಿಂತಲು ಹೆಚ್ಚು ವಹಿವಾಟು ನಡೆಸುವ ಉದ್ದಿಮೆಗಳು ಸೂಕ್ಷ್ಮ ಕೈಗಾರಿಕೆ ವಿಭಾಗದಿಂದ ಹೊರಗುಳಿಯುತ್ತವೆ. ಇದರಿಂದ ಹಲವರಿಗೆ ತೊಂದರೆ ಆಗುತ್ತಿದೆ. ಹಾಗಾಗಿ ಮಾನದಂಡ ಬದಲು ಮಾಡುವಂತೆ ಮನವಿ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಎಂಎಸ್‌ಎಂಇಗಳ ವರ್ಗೀಕರಣ ಮಾಡಲಾಗುತ್ತದೆ.

#f1f1f1 - POINT 2ದೇಶಾದ್ಯಂತ ಉದ್ದಿಮೆಗಳ ಕ್ಲಸ್ಟರ್‌ಗಳನ್ನು ಸ್ಥಾಪಿಸಲಾಗುತ್ತಿದೆ. ಒಂದೇ ಬಗೆಯ ಉದ್ದಿಮೆಯನ್ನು ನಡೆಸುತ್ತಿರುವವರು ಒಂದೇ ಕಡೆಯಲ್ಲಿ ಕಾರ್ಯನಿರ್ವಹಣೆ ಮಾಡುವಂತಾಗಬೇಕು ಎಂಬುದು ಇದರ ಉದ್ದೇಶ. ಶಿವಮೊಗ್ಗದಲ್ಲಿ ಫೌಂಡ್ರಿ ಕ್ಲಸ್ಟರ್‌ ಸ್ಥಾಪಿಸಲಾಗುತ್ತಿದೆ. ಅತಿ ಶೀಘ್ರ ಇದನ್ನು ಅನುಷ್ಠಾನಗೊಳಿಸಲಾಗುತ್ತದೆ. ಕ್ಲಸ್ಟರ್‌ ಸ್ಥಾಪನೆಗೆ ₹30 ಕೋಟಿ ಅಗತ್ಯ. ಈ ಪೈಕಿ ₹21 ಕೋಟಿಯನ್ನು ಕೇಂದ್ರ ಸರ್ಕಾರ ಒದಗಿಸಲಿದೆ.

#f1f1f1 - POINT 3ಅಸಂಘಟಿತ ಕಾರ್ಮಿಕರಿಗು ಇಎಸ್‌ಐ, ಪಿಎಫ್‌ ಸೌಲಭ್ಯ ದೊರೆಯಬೇಕು ಎಂಬುದು ಕೇಂದ್ರ ಸರ್ಕಾರದ ಯೋಚನೆ. ಆದರೆ ಬ್ರಿಟೀಷ್‌ ಕಾಲದ ಕಾನೂನುಗಳಲ್ಲಿ ಇದಕ್ಕೆ ಅವಕಾಶವಿಲ್ಲ. ಬ್ರಿಟೀಷರು ಕಾರ್ಮಿಕರನ್ನು ಗುಲಾಮರು ಎಂಬಂತೆ ಭಾವಿಸಿದ್ದರು. ಇದೇ ಕಾರಣಕ್ಕೆ ಆ ಕಾಯ್ದೆಗಳನ್ನು ಬದಲಿಸಲಾಗುತ್ತಿದೆ. ಇವತ್ತಿನ ಪರಿಸ್ಥಿತಿಗೆ ಅನುಗುಣವಾಗಿ ಕಾನೂನು ಸಿದ್ದಪಡಿಸಲಾಗುತ್ತಿದೆ. ಅಸಂಘಟಿತ ಕಾರ್ಮಿಕರಿಗು ಅನುಕೂಲವಾಗಲಿದೆ.

ಕೊಡೇಸ್‌ ಕಂಪನಿಯ ಜಮೀನು ಖಾಲಿ ಉಳಿದೆ. ಇದರ ಸದುಪಯೋಗಕ್ಕೆ ಗಮನ ಹರಿಸಬೇಕು ಪ್ರತಿ ವರ್ಷ ಏಳು ಲಕ್ಷ ಟನ್‌ ವೇಸ್ಟ್‌ ಸ್ಯಾಂಡ್‌ ಶುದ್ಧೀಕರ ಮಾಡಲಾಗುವುದು. ಇಲ್ಲಿ ಸ್ಕಿಲ್‌ ಡೆವಲಪ್‌ಮೆಂಟ್‌ ಸೆಂಟರ್‌ ಸ್ಥಾಪಿಸಲಾಗಿದೆ. ಇದರಿಂದ ಉದ್ದಿಮೆಗಳಿಗೆ ಅನುಕೂಲವಾಗುತ್ತಿದೆ.

  • ಬಿ.ವೈ.ರಾಘವೇಂದ್ರ, ಸಂಸದ

RED-LINE-

ವೇಸ್ಟ್‌ ಸ್ಯಾಂಡ್‌ ಮರುಬಳಕೆ ಮಾಡುವ ಯೋಜನೆ ಸಿದ್ದಪಡಿಸಬೇಕು. ಕ್ಲಸ್ಟರ್‌ಗೆ ₹30 ಕೋಟಿ ವೆಚ್ಚವಾಗಲಿದೆ. ₹21 ಕೋಟಿಯನ್ನು ಕೇಂದ್ರ ಸರ್ಕಾರ, ₹4 ಕೋಟಿಯನ್ನು ರಾಜ್ಯ ಸರ್ಕಾರ ಭರಿಸಲಿದೆ. ಉಳಿಕೆ ಹಣವನ್ನು ಕ್ಲಸ್ಟರ್‌ ಸದಸ್ಯರು ತೊಡಗಿಸಬೇಕು. ಕ್ಲಸ್ಟರ್‌ಗೆ ಕೇಂದ್ರ ಸರ್ಕಾರ ಬೇಗ ಅನುಮತಿ ನೀಡಬೇಕು.

  • ಬೆನಕಪ್ಪ, ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಸಂಘದ ಅಧ್ಯಕ್ಷ

RED-LINE-

ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಡಿ.ಎಸ್.ಅರುಣ್, ಡಾ. ಧನಂಜಯ ಸರ್ಜಿ, ಉದ್ಯಮಿ ಎಸ್‌.ರುದ್ರೇಗೌಡ, ಪ್ರಮುಖರಾದ ಎಸ್.ಎಸ್.ಜ್ಯೋತಿಪ್ರಕಾಶ್, ರಮೇಶ್ ಹೆಗ್ಡೆ, ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್ ಸೇರಿ ಹಲವರು ಇದ್ದರು.

central minister shobha karandlaje visit to Machenahalli industrial area
ಮಾಚೇನಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಭೇಟಿ.
central minister shobha karandlaje visit to Machenahalli industrial area
ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದ ಕುರಿತು ಸಚಿವ ಶೋಭಾ ಕರಂದ್ಲಾಜೆ ಅವರಿಗೆ ಮಾಹಿತಿ ನೀಡಲಾಯಿತು.
central minister shobha karandlaje visit to Machenahalli industrial area
ಕಾರ್ಮಿಕ ಮಹಿಳೆಯರ ಜೊತೆಗೆ ಸಚಿವೆ ಶೋಭಾ ಕರಂದ್ಲಾಜೆ.
central minister shobha karandlaje visit to Machenahalli industrial area
ಮಾಚೇನಹಳ್ಳಿ ಕಾರ್ಯಕ್ರಮದಲ್ಲಿ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಚನ್ನಬಸಪ್ಪ, ಡಿ.ಎಸ್‌.ಅರುಣ್‌, ಉದ್ಯಮಿಗಳಾದ ಎಸ್.ರುದ್ರೇಗೌಡ, ಎಸ್.ಎಸ್.ಜ್ಯೋತಿಪ್ರಕಾಶ್‌.
central minister shobha karandlaje visit to Machenahalli industrial area
ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಭಾಷಣ.
central minister shobha karandlaje visit to Machenahalli industrial area
ಕಾರ್ಯಕ್ರಮದಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಭಾಷಣ.
central minister shobha karandlaje visit to Machenahalli industrial area
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್‌ ಮಾಜಿ ಸದಸ್ಯ ಎಸ್.ರುದ್ರೇಗೌಡ ಮತ್ತು ಸಂಸದ ಬಿ.ವೈ.ರಾಘವೇಂದ್ರ.
central minister shobha karandlaje visit to Machenahalli industrial area
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾರ್ಮಿಕರು.

ಇದನ್ನೂ ಓದಿ » ಶಿವಮೊಗ್ಗದ ಕೈಗಾರಿಕೆಗಳಿಗೆ ಪ್ರಶಸ್ತಿ, ಅತ್ಯುತ್ತಮ ಕಾರ್ಮಿಕರಿಗೆ ಗೌರವ, ವಿಜೇತರ ಪಟ್ಟಿ ಪ್ರಕಟ

Minister shobha karandlaje visit Machenahalli Industrial Area

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : September 14, 2025 at 1:40 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಸೆಪ್ಟೆಂಬರ್ 14, 2025

Leave a Comment