ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 29 DECEMBER 2020
ವಿಧಾನ ಪರಿಷತ್ ಉಪ ಸಭಾಪತಿ ಧರ್ಮೇಗೌಡ ಆತ್ಮಹತ್ಯೆ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಇವತ್ತು ಸಚಿವರ ಸಿಟಿ ರೌಂಡ್ಸ್ ಕಾರ್ಯಕ್ರಮ ರದ್ದುಗೊಳಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಅವರು ಇವತ್ತು ಶಿವಮೊಗ್ಗ ನಗರದ ವಿವಿಧೆಡೆ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಶೀಲನೆಗೆ ನಡೆಸಬೇಕಿತ್ತು. ಬೆಳಗ್ಗೆ 6 ಗಂಟೆಯಿಂದಲೇ ಪರಿಶೀಲನೆ ಆರಂಭವಾಗಬೇಕಿತ್ತು. ಆದರೆ ಧರ್ಮೇಗೌಡ ಅವರ ಆತ್ಮಹತ್ಯೆ ಸುದ್ದಿ ತಿಳಿದು, ಬೆಳಗಿನ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.
ಇದನ್ನೂ ಓದಿ | ಉಪ ಸಭಾಪತಿ ಅತ್ಮಹತ್ಯೆ ಹಿನ್ನೆಲೆ, ಶಿವಮೊಗ್ಗದಲ್ಲಿ ಇವತ್ತು ನಡೆಯಬೇಕಿದ್ದ ಸಚಿವರ ಸಿಟಿ ರೌಂಡ್ಸ್ ರದ್ದು
ಸಂತಾಪ ಸೂಚಿಸಿದ ಮಿನಿಸ್ಟರ್
ಇನ್ನು, ಶಿವಮೊಗ್ಗ ಪ್ರವಾಸಿ ಮಂದಿರದಲ್ಲಿ ಉಳಿದುಕೊಂಡಿರುವ ಸಚಿವ ಭೈರತಿ ಬಸವರಾಜು ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಎಸ್.ಎಲ್.ಧರ್ಮೇಗೌಡ ನಿಧನಕ್ಕೆ ಸಂತಾಪ ಸೂಚಿಸಿದರು.
ಉಪ ಸಭಾಪತಿಯಾಗಿ ಉತ್ತಮ ಕೆಲಸ ಮಾಡುತ್ತಿದ್ದರು. ಮಾಧ್ಯಮಗಳಲ್ಲಿ ಅವರ ನಿಧನದ ವಿಚಾರ ತಿಳಿಯಿತು. ಜನಪ್ರತಿನಿಧಿಯಾಗಿ ಇಂತಹ ನಿರ್ಧಾರ ಕೈಗೊಳ್ಳಬಾರದಿತ್ತು ಎಂದು ತಿಳಿಸಿದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]