ಶಿವಮೊಗ್ಗದಲ್ಲಿ ಕಂದಾಯ ಸಚಿವರ ವಾಸ್ತವ್ಯಕ್ಕೆ ಗ್ರಾಮ ನಿಗದಿ, ದಿನಾಂಕ ಫಿಕ್ಸ್, ತಹಶೀಲ್ದಾರ್ ನೇತೃತ್ವದಲ್ಲಿ ಮೀಟಿಂಗ್

SHIVAMOGGA LIVE NEWS | 16 JANUARY 2023

SHIMOGA : ಜ.28ರಂದು ‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಗ್ರಾಮ ವಾಸ್ತವ್ಯ (grama vastavya) ಕಾರ್ಯಕ್ರಮ ನಿಗದಿಯಾಗಿದೆ. ಕಂದಾಯ ಸಚಿವ ಆರ್.ಅಶೋಕ್ ಅವರು ಜಿಲ್ಲೆಯಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಈ ಹಿನ್ನೆಲೆ ಇವತ್ತು ತಹಶೀಲ್ದಾರ್ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ➤ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

R Ashok Minister

 ವಾಸ್ತವ್ಯಕ್ಕೆ ಗ್ರಾಮ ನಿಗದಿ 

ಜ.28ರಂದು ಶಿವಮೊಗ್ಗ ತಾಲೂಕು ಹೊಳಲೂರು (Holaluru) ಗ್ರಾಮದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಅವರು ವಾಸ್ತವ್ಯ (grama vastavya) ಮಾಡಲಿದ್ದಾರೆ. ಈ ಹಿನ್ನೆಲೆ ಸಿದ್ಧತೆಗಳ ಕುರಿತು ಶಿವಮೊಗ್ಗ ತಹಶೀಲ್ದಾರ್ ಡಾ.ನಾಗರಾಜ್ ಅವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ತಾಲೂಕು ಕಚೇರಿಯಲ್ಲಿ ನಡೆದ ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಏನೆಲ್ಲ ಸೂಚನೆ ನೀಡಿದರು?

ಹೊಳಲೂರು ಗ್ರಾಮದ ಮಾರುತಿ ಪ್ರೌಢಶಾಲೆ ಆವರಣದಲ್ಲಿ ಜ.28 ರಂದು ಬೆಳಿಗ್ಗೆ 11 ರಿಂದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಆರಂಭವಾಗಲಿದೆ. ತಾಲ್ಲೂಕು ಕಚೇರಿ ವ್ಯಾಪ್ತಿಯ 41 ಇಲಾಖೆಗಳಿಗೆ ಈಗಾಗಲೇ ಸಿದ್ದತೆ ಕುರಿತು ಮಾಹಿತಿ ನೀಡಲಾಗಿದೆ. ಅವಶ್ಯಕ ಸಿದ್ದತೆ ಮಾಡಿಕೊಳ್ಳಬೇಕು. ಫಲಾನುಭವಿಗಳ ಪಟ್ಟಿ ತಯಾರಿಸಿ, ಅವರಿಗೆ ಸೂಕ್ತ ಆಸನ ವ್ಯವಸ್ಥೆ ಮಾಡಬೇಕು. ಆದೇಶಗಳ ಸುಗಮ ವಿತರಣೆಗೆ ಸೂಕ್ತ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಹಶೀಲ್ದಾರ್ ಡಾ. ನಾಗರಾಜ್ ಅವರು ಅಧಿಕಾರಿಗಳಿಗೆ ತಿಳಿಸಿದರು.

Tahasildhar Dr Nagaraj Shimoga

14 ಮಳಿಗೆ ತೆರೆಯಬೇಕು

ಸರ್ಕಾರದ ವಿವಿಧ ಯೋಜನೆಗಳು, ಕಾರ್ಯಕ್ರಮಗಳ ಕುರಿತು ಮಾಹಿತಿ ಮತ್ತು ಪ್ರಾತ್ಯಕ್ಷಿತೆ ಒದಗಿಸುವ ವಿವಿಧ 14 ಮಳಿಗೆಗಳನ್ನು ತೆರೆಯುವಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಸೂಚನೆ ನೀಡಿದ್ದಾರೆ. ಅದರ ಸಿದ್ದತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಹಶೀಲ್ದಾರ್ ಅವರು ತಿಳಿಸಿದರು.

Shimoga Live 3 million Views

ವಾಹನಗಳ ಪಾರ್ಕಿಂಗ್, ಸುಗಮ ಸಂಚಾರ, ಸುರಕ್ಷತಾ ವ್ಯವಸ್ಥೆ ಕುರಿತು ಪೊಲೀಸ್ ಇಲಾಖೆಯಿಂದ ಸ್ಥಳ ಪರಿಶೀಲನೆ ನಡೆಸಬೇಕು ಎಂದು ಸೂಚಿಸಲಾಯಿತು.

ಇದನ್ನೂ ಓದಿ – ಇನ್ಮುಂದೆ ಶಿವಮೊಗ್ಗ ಲೈವ್ ಅಂದರೆ ಬರಿ ಸುದ್ದಿಯಲ್ಲ, ಇದು ನಮ್ಮೂರು ಅಂತಾ ನಾವೆಲ್ಲ ಹೆಮ್ಮೆಯಿಂದ ಬೀಗುವಂತೆ ಮಾಡುತ್ತೇವೆ

ಸಭೆಯಲ್ಲಿ ಡಿವೈಎಸ್‍ಪಿ ಸುರೇಶ್, ಉಪ ತಹಶೀಲ್ದಾರ್ ಗಣೇಶ್, ತಾಲ್ಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment