SHIVAMOGGA LIVE NEWS | 30 AUGUST 2023
SHIMOGA : ವಸ್ತುಸ್ಥಿತಿಯನ್ನು ಗಮನಿಸಿ ಶಿವಮೊಗ್ಗ ಜಿಲ್ಲೆಯನ್ನು ಬರಗಾಲ ಪೀಡಿತ (drought prone) ಎಂದು ಘೋಷಣೆ ಮಾಡಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಿ ನಂತರ ಸಚಿವ ಮಧು ಬಂಗಾರಪ್ಪ ಸುದ್ದಿಗಾರರೊಂದಿಗೆ ಮಾತನಾಡಿದರು.
ಬರಗಾಲ ಪೀಡಿತ ಘೋಷಣೆಗೆ ಕೇಂದ್ರದ ಕಾನೂನುಗಳಿವೆ. ಆದರೆ ವಸ್ತುಸ್ಥಿತಿಯನ್ನು ಗಮನಿಸಿ ಜಿಲ್ಲೆಯನ್ನು ಬರಗಾಲ ಪೀಡಿತ ಎಂದು ಘೋಷಿಸಬೇಕು. ಆ ಬಳಿಕ ರೈತರಿಗೆ ಪರಿಹಾರ ಲಭಿಸಲಿದೆ. ಬೆಳೆ ವಿಮೆ ಪ್ರಕ್ರಿಯೆಯನ್ನು ವೇಗಗೊಳಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.
ಬಿಜೆಪಿಯವರಿಗೆ ಒಂದು ಬಗೆಯ ರೋಗ
ಸರ್ಕಾರದ ವಿರುದ್ಧ ಬಿಜೆಪಿ ಚಾರ್ಜ್ ಶೀಟ್ ಬಿಡುಗಡೆ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ, ಸೋತಿರುವವರಿಗೆ ಟೀಕೆ, ಟಿಪ್ಪಣಿ ಮಾಡುವುದರ ಹೊರತು ಬೇರೆ ಕೆಲಸವಿರುವುದಿಲ್ಲ. ಬಿಜೆಪಿಯವರು ಸುಮ್ಮನೆ ಟೀಕೆ ಮಾಡುತ್ತಾರೆ. ಅದು ಒಂದು ಬಗೆಯ ರೋಗ. ಬಿಜೆಪಿ ನಾಯಕರನ್ನು ಅವರ ಪ್ರಧಾನಿಯೇ ಯಾವ ಸ್ಥಾನದಲ್ಲಿ ನಿಲ್ಲಿಸಿದ್ದರು ಎಂದು ನೋಡಿದ್ದೇವೆ ಎಂದು ತಿರುಗೇಟು ನೀಡಿದರು.
ಇದನ್ನೂ ಓದಿ- ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆಯಲ್ಲಿ ಉತ್ಪಾದನೆ ಆರಂಭ
ಮತ್ತೊಂದು ಐತಿಹಾಸಿಕ ಕಾರ್ಯಕ್ರಮ
ಇನ್ನು, ಕಾಂಗ್ರೆಸ್ ಪಕ್ಷ ಹಲವು ಐತಿಹಾಸಿಕ ಕಾರ್ಯಕ್ರಮಗಳನ್ನು ನೀಡಿದೆ. ಈಗ ಇಂತಹುದೆ ಮತ್ತೊಂದು ಕಾರ್ಯಕ್ರಮವನ್ನು ಜಾರಿ ಮಾಡುತ್ತಿದೆ. ಗೃಹಲಕ್ಷ್ಮಿ ಯೋಜನೆ ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ರೂ., ವಾರ್ಷಿಕ 24 ಸಾವಿರ ರೂ. ಹಣ ಕೊಡಲಾಗುತ್ತಿದೆ. ಇದರಿಂದ ಅವರ ಮನೆ ಖರ್ಚುಗಳನ್ನು ನಿಭಾಯಿಸಲು ಅನುಕೂಲ ಆಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಈಗಾಗಲೆ ಶಕ್ತಿ, ಗೃಹ ಜ್ಯೋತಿ, ಅನ್ನಭಾಗ್ಯ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಗೃಹ ಲಕ್ಷ್ಮಿಯಿಂದ ಮಹಿಳೆಯರಿಗೆ ಅನುಕೂಲ ಆಗಲಿದೆ ಎಂದು ತಿಳಿಸಿದರು.
ಕಾವೇರಿ ವಿವಾದ ನ್ಯಾಯಾಲಯದಲ್ಲಿದೆ. ಕಾನೂನಿಗೆ ನಾವು ತಲೆಬಾಗಬೇಕಿದೆ. ಎರಡು ಕಡೆಯಲ್ಲಿರುವವರು ರೈತರೆ. ನಮ್ಮ ರಾಜ್ಯದ ರೈತರ ಹಿತದೃಷ್ಟಿಯನ್ನು ನಾವು ಗಮನಿಸಬೇಕಾಗುತ್ತದೆ. ವಸ್ತುಸ್ಥಿತಿಯನ್ನು ನ್ಯಾಯಾಲಯ ಪರಿಗಣಿಸಲಿದೆ ಎಂದು ಸಚಿವ ಮಧು ಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200