ಶಿವಮೊಗ್ಗ ಬರಗಾಲ ಪೀಡಿತ ಜಿಲ್ಲೆ ಘೋಷಣೆಗೆ ಕ್ರಮ, ಬಿಜೆಪಿ ಚಾರ್ಜ್‌ಶೀಟ್‌ಗೆ ಮಿನಿಸ್ಟರ್‌ ಖಡಕ್‌ ತಿರುಗೇಟು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 30 AUGUST 2023

SHIMOGA : ವಸ್ತುಸ್ಥಿತಿಯನ್ನು ಗಮನಿಸಿ ಶಿವಮೊಗ್ಗ ಜಿಲ್ಲೆಯನ್ನು ಬರಗಾಲ ಪೀಡಿತ (drought prone) ಎಂದು ಘೋಷಣೆ ಮಾಡಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಿ ನಂತರ ಸಚಿವ ಮಧು ಬಂಗಾರಪ್ಪ ಸುದ್ದಿಗಾರರೊಂದಿಗೆ ಮಾತನಾಡಿದರು.

ಬರಗಾಲ ಪೀಡಿತ ಘೋಷಣೆಗೆ ಕೇಂದ್ರದ ಕಾನೂನುಗಳಿವೆ. ಆದರೆ ವಸ್ತುಸ್ಥಿತಿಯನ್ನು ಗಮನಿಸಿ ಜಿಲ್ಲೆಯನ್ನು ಬರಗಾಲ ಪೀಡಿತ ಎಂದು ಘೋಷಿಸಬೇಕು. ಆ ಬಳಿಕ ರೈತರಿಗೆ ಪರಿಹಾರ ಲಭಿಸಲಿದೆ. ಬೆಳೆ ವಿಮೆ ಪ್ರಕ್ರಿಯೆಯನ್ನು ವೇಗಗೊಳಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

ಬಿಜೆಪಿಯವರಿಗೆ ಒಂದು ಬಗೆಯ ರೋಗ

ಸರ್ಕಾರದ ವಿರುದ್ಧ ಬಿಜೆಪಿ ಚಾರ್ಜ್‌ ಶೀಟ್‌ ಬಿಡುಗಡೆ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ, ಸೋತಿರುವವರಿಗೆ ಟೀಕೆ, ಟಿಪ್ಪಣಿ ಮಾಡುವುದರ ಹೊರತು ಬೇರೆ ಕೆಲಸವಿರುವುದಿಲ್ಲ. ಬಿಜೆಪಿಯವರು ಸುಮ್ಮನೆ ಟೀಕೆ ಮಾಡುತ್ತಾರೆ. ಅದು ಒಂದು ಬಗೆಯ ರೋಗ. ಬಿಜೆಪಿ ನಾಯಕರನ್ನು ಅವರ ಪ್ರಧಾನಿಯೇ ಯಾವ ಸ್ಥಾನದಲ್ಲಿ ನಿಲ್ಲಿಸಿದ್ದರು ಎಂದು ನೋಡಿದ್ದೇವೆ ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ- ಭದ್ರಾವತಿ ವಿಐಎಸ್‌ಎಲ್‌ ಕಾರ್ಖಾನೆಯಲ್ಲಿ ಉತ್ಪಾದನೆ ಆರಂಭ

ಮತ್ತೊಂದು ಐತಿಹಾಸಿಕ ಕಾರ್ಯಕ್ರಮ

ಇನ್ನು, ಕಾಂಗ್ರೆಸ್‌ ಪಕ್ಷ ಹಲವು ಐತಿಹಾಸಿಕ ಕಾರ್ಯಕ್ರಮಗಳನ್ನು ನೀಡಿದೆ. ಈಗ ಇಂತಹುದೆ ಮತ್ತೊಂದು ಕಾರ್ಯಕ್ರಮವನ್ನು ಜಾರಿ ಮಾಡುತ್ತಿದೆ. ಗೃಹಲಕ್ಷ್ಮಿ ಯೋಜನೆ ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ರೂ., ವಾರ್ಷಿಕ 24 ಸಾವಿರ ರೂ. ಹಣ ಕೊಡಲಾಗುತ್ತಿದೆ. ಇದರಿಂದ ಅವರ ಮನೆ ಖರ್ಚುಗಳನ್ನು ನಿಭಾಯಿಸಲು ಅನುಕೂಲ ಆಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ನೇತೃತ್ವದಲ್ಲಿ ಈಗಾಗಲೆ ಶಕ್ತಿ, ಗೃಹ ಜ್ಯೋತಿ, ಅನ್ನಭಾಗ್ಯ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಗೃಹ ಲಕ್ಷ್ಮಿಯಿಂದ ಮಹಿಳೆಯರಿಗೆ ಅನುಕೂಲ ಆಗಲಿದೆ ಎಂದು ತಿಳಿಸಿದರು.

ಕಾವೇರಿ ವಿವಾದ ನ್ಯಾಯಾಲಯದಲ್ಲಿದೆ. ಕಾನೂನಿಗೆ ನಾವು ತಲೆಬಾಗಬೇಕಿದೆ. ಎರಡು ಕಡೆಯಲ್ಲಿರುವವರು ರೈತರೆ. ನಮ್ಮ ರಾಜ್ಯದ ರೈತರ ಹಿತದೃಷ್ಟಿಯನ್ನು ನಾವು ಗಮನಿಸಬೇಕಾಗುತ್ತದೆ. ವಸ್ತುಸ್ಥಿತಿಯನ್ನು ನ್ಯಾಯಾಲಯ ಪರಿಗಣಿಸಲಿದೆ ಎಂದು ಸಚಿವ ಮಧು ಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 30, 2023

Leave a Comment