ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 23 DECEMBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಹಿಜಾಬ್ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧ. ಬಿಜೆಪಿಯವರು ಇಲ್ಲಸಲ್ಲದ ಟೀಕೆ ಮಾಡುವ ಬದಲು ಬರ ಅಧ್ಯಯನ ವರದಿಯನ್ನು ಕೇಂದ್ರಕ್ಕೆ ತಲುಪಿಸಲಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸವಾಲು ಹಾಕಿದರು.
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಬಿಜೆಪಿ ವಿರುದ್ಧ ಹರಿಹಾಯ್ದರು
ಮಿನಿಸ್ಟರ್ ಹೇಳಿಕೆ, ಇಲ್ಲಿದೆ 4 ಪಾಯಿಂಟ್
ಚುನಾವಣೆ ಸಂದರ್ಭದಲ್ಲಿ ಬಿಜೆಪಿಯವರು ಹಿಜಾಬ್ ನಿಷೇಧ, ಪಠ್ಯ ಪುಸ್ತಕ ಪರಿಷ್ಕರಣೆ ಕೈ ಹಾಕಿದರು. ಆ ಸಂದರ್ಭದಲ್ಲೆ ಸಿದ್ದರಾಮಯ್ಯ ಅವರು ಹಿಜಾಬ್ ನಿಷೇಧಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಆಯಾ ಧರ್ಮದ ಪದ್ಧತಿಗಳ ಪಾಲನೆಗೆ ಅಡ್ಡಿ ಉಂಟು ಮಾಡಬಾರದು ಎಂದಿದ್ದರು. ಈಗ ಕಾರ್ಯಕ್ರಮ ಒಂದರಲ್ಲಿ ಯಾರೋ ಕೇಳಿದ ಪ್ರಶ್ನೆಗೆ ಉತ್ತರಿಸುವಾಗ ನಿಷೇಧ ಹಿಂಪಡೆಯುವ ಹೇಳಿಕೆ ನೀಡಿದ್ದಾರೆ ಎಂದಿದ್ದಾರೆ. ಬಿಜೆಪಿಯವರು ಇಂತಹ ವಿಷಯಗಳನ್ನು ಮಾತ್ರ ಆಯ್ಕೆ ಮಾಡುತ್ತಾರೆ. ಪರೇಶ್ ಮೇಸ್ತಾ ವಿಚಾರದಲ್ಲಿ ಕೈ ಹಾಕಿದ್ದರು. ಶಿವಮೊಗ್ಗದ ರಾಗಿಗುಡ್ಡದಲ್ಲಿ ಪುನಃ ಗಲಭೆಗೆ ಮುಂದಾಗಿದ್ದರು.
ನಮ್ಮ ದೇಶ ಗಲಭೆಯ ಕಾರಣಕ್ಕೆ ಪ್ರಸಿದ್ಧವಾಗಿಲ್ಲ. ವೈವಿಧ್ಯತೆಯ ಕಾರಣಕ್ಕೆ ಮನ್ನಣೆ ಗಳಿಸಿದೆ. ಶಾಲೆಯಲ್ಲಿ ಮಕ್ಕಳು ಸಮಾನವಾಗಿರುಬೇಕು. ಇದು ಸೂಕ್ಷ್ಮ ವಿಷಯ ಅನ್ನುತ್ತಾರೆ. ಹಾಗೆಯೇ ಅವರವರ ಧರ್ಮದ ಪದ್ಧತಿಗು ಮನ್ನಣೆ ನೀಡಬೇಕಿದೆ. ಹಿಜಾಬ್ ಕುರಿತು ಎಸ್‌ಡಿಎಂಸಿ ಅವರು ತೀರ್ಮಾನ ಕೈಗೊಳ್ಳಬಹುದು ಎಂದು ನ್ಯಾಯಾಲಯ ಆದೇಶಿಸಿತ್ತು.
ಬಿಜೆಪಿಯವರು ಬರ ಅಧ್ಯಯನ ನಡೆಸಿದರು. ಅದರ ವರದಿ ಎಲ್ಲಿದೆ. ಮೊದಲು ಅದನ್ನು ಕೇಂದ್ರಕ್ಕೆ ತಲುಪಿಸಲಿ. ರಾಜ್ಯದಿಂದ ಕೇಂದ್ರಕ್ಕೆ 4 ಲಕ್ಷ ರೂ. ತೆರಿಗೆ ಪಾವತಿ ಆಗುತ್ತಿದೆ. ಆದರೆ ಕಡಿಮೆ ಪಾಲು ಬರುತ್ತಿದೆ. ಇಂತಹ ವಿಷಯಗಳನ್ನು ಬಿಜೆಪಿ ಪ್ರಸ್ತಾಪಿಸಲಿ.
ಹಿಜಾಬ್ ನಿಷೇಧ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಜೊತೆ ಸಮಾಲೋಚಿಸಲಿದ್ದಾರೆ. ಕಾನೂನು ಇಲಾಖೆ ಅಧಿಕಾರಿಗಳು ಕೂಡ ಪರಿಶೀಲಿಸಲಿದ್ದಾರೆ. ಸಿದ್ದರಾಮಯ್ಯ ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧ.
ಪ್ರಮುಖರಾದ ಆರ್.ಪ್ರಸನ್ನ ಕುಮಾರ್, ವಿಜಯ ಕುಮಾರ್, ಕಲಗೋಡು ರತ್ನಾಕರ್, ಎಸ್.ಪಿ.ದಿನೇಶ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ತುಘಲಕ್‌ನಂತೆ ಸಿದ್ದರಾಮಯ್ಯ ಕೂಡ ಹುಚ್ಚು ದೊರೆ, ಇಲ್ಲಿದೆ ಈಶ್ವರಪ್ಪ ಹೇಳಿಕೆಯ 4 ಪಾಯಿಂಟ್