ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 15 SEPTEMBER 2024 : ಜಿಲ್ಲಾ ಉಸ್ತುವಾರಿ ಸಚಿವ (Minister) ಮಧು ಬಂಗಾರಪ್ಪ ಎರಡು ದಿನ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಸೆ.15 ಮತ್ತು 16ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸ್ತಾರೆ?
ಸೆ.15ರಂದು ಬೆಳಗ್ಗೆ 8.50ಕ್ಕೆ ಮಹಾನಗರ ಪಾಲಿಕೆ ಆವರಣದಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ಬೆಳಗ್ಗೆ 9.15ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ ರಚನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಬೆಳಗ್ಗೆ 11.30ಕ್ಕೆ ಸೊರಬದ ರಂಗಮಂದಿರದಲ್ಲಿ ತಾಲೂಕಿನ ಶಿಕ್ಷಕರ ದಿನಾಚರಣೆಯಲ್ಲಿ ಸಚಿವ ಮಧು ಬಂಗಾರಪ್ಪ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಸೊರಬದ ಹೊಸಬಾಳೆಯಲ್ಲಿ ವ್ಯವಸಾಯ ಸೇವಾ ಸಹಕಾರ ಸಂಘದ ಅಮೃತ ಮಹೋತ್ಸವ ಕಾಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸೊರಬದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಸೆ.16ರಂದು ಸಚಿವ ಮಧು ಬಂಗಾರಪ್ಪ ಅವರು ಬೆಳಗ್ಗೆ 10 ಗಂಟೆಗೆ ಶಿಕಾರಿಪುರ ತಾಲೂಕಿನ ಬಗನಕಟ್ಟೆ ಗ್ರಾಮದಲ್ಲಿ ಆಯುಷ್ಮಾನ್ ಆರೋಗ್ಯ ಮಂದಿರದ ಉದ್ಘಾಟನೆ ಮಾಡಲಿದ್ದಾರೆ. ಮಧ್ಯಾಹ್ನ 12ಕ್ಕೆ ಶಿರಾಳಕೊಪ್ಪ ಪಟ್ಟಣದಲ್ಲಿ 50 ಹಾಸಿಗೆಗೆ ಮೇಲ್ದರ್ಜೆಗೇರಿಸಿದ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡದ ಉದ್ಘಾಟನೆ ನೆರವೇರಿಸಲಿದ್ದಾರೆ.
ಇದನ್ನೂ ಓದಿ » ಬೈಕ್ ಓಡಿಸಿದ್ದು ಮಗ, ಭಾರಿ ದಂಡ ಕಟ್ಟಬೇಕಾಯ್ತು ಅಪ್ಪ, ಏನಿದು ಕೇಸ್?