ಶಿವಮೊಗ್ಗ: ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿಗಳ (Guarantees) ಜೊತೆಗೆ ಶಿಕ್ಷಣವನ್ನೂ ಒಂದು ಗ್ಯಾರಂಟಿ ರೂಪದಲ್ಲಿ ನೀಡಲಾಗುತ್ತಿದೆ. ಕೇವಲ ಫಲಿತಾಂಶ (Result) ಮುಖ್ಯವಲ್ಲ, ಶಿಕ್ಷಣದ ಗುಣಮಟ್ಟ (Quality of education) ಹೆಚ್ಚಿಸುವುದೇ ನಮ್ಮ ಪ್ರಮುಖ ಆದ್ಯತೆ, ಎಂದು ಶಾಲಾ ಶಿಕ್ಷಣ ಸಚಿವ (School Education Minister) ಮಧು ಬಂಗಾರಪ್ಪ ತಿಳಿಸಿದರು.
ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿ (Chief Minister) ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಶಿಕ್ಷಣ ಇಲಾಖೆಯಲ್ಲಿ ಸಾಕಷ್ಟು ಸುಧಾರಣೆ (Reforms) ತರಲಾಗಿದೆ. ಜೂನ್ 1ರಂದು ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ರಾಜ್ಯದ 1,000 ಕರ್ನಾಟಕ ಪಬ್ಲಿಕ್ ಶಾಲೆಗಳ (Karnataka Public Schools – KPS) ಶಂಕುಸ್ಥಾಪನೆ (Foundation stone laying) ನೆರವೇರಲಿದೆ ಎಂದು ತಿಳಿಸಿದರು.

ತೆಲಂಗಾಣದಲ್ಲಿಯು ನಮ್ಮದೇ ಮಾದರಿ
ಮಕ್ಕಳನ್ನು ಆಕರ್ಷಿಸುತ್ತಿರುವ ನಮ್ಮ ಈ ಕೆಪಿಎಸ್ ಮಾದರಿಯನ್ನು ನೋಡಿ ಈಗ ತೆಲಂಗಾಣದಲ್ಲೂ ಟಿಪಿಎಸ್ (TPS) ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯೊಂದರಲ್ಲೇ ಒಟ್ಟು 19 ಕೆಪಿಎಸ್ ಶಾಲೆಗಳು ನಿರ್ಮಾಣವಾಗಲಿದೆ. ದುರ್ಗಿಗುಡಿ ಹಾಗೂ ಮಿಳಘಟ್ಟ ಶಾಲೆಗಳನ್ನು ಈಗಾಗಲೇ ಆಯ್ಕೆ (Selected) ಮಾಡಲಾಗಿದೆ. ಜೂನ್ 1ರ ಕಾರ್ಯಕ್ರಮದಲ್ಲಿ ಜಿಲ್ಲೆಯ 7 ಕೆಪಿಎಸ್ ಶಾಲೆಗಳಿಗೆ ಮುಖ್ಯಮಂತ್ರಿಗಳು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದರು.
ಶಿವಮೊಗ್ಗದಲ್ಲಿ ಬೃಹತ್ ಕಾರ್ಯಕ್ರಮ
ಜೂನ್ 1ರಂದು ಶಿವಮೊಗ್ಗದಲ್ಲಿ ಶಿಕ್ಷಣ ಇಲಾಖೆಯಿಂದ ರಾಜ್ಯ ಮಟ್ಟದ ಬೃಹತ್ ಕಾರ್ಯಕ್ರಮ (State-level mega event) ಆಯೋಜನೆಯಾಗಿದೆ. ಸಿಎಂ, ಡಿಸಿಎಂ ಸೇರಿ ಹಲವು ಸಚಿವರು ಪಾಲ್ಗೊಳ್ಳಲಿದ್ದಾರೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ (SSLC exam) 625 ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಅವರು ಸನ್ಮಾನ (Felicitation) ಮಾಡಲಿದ್ದಾರೆ. ಬಳಿಕ ಸಿದ್ದರಾಮಯ್ಯ ಅವರು ಆ ಮಕ್ಕಳೊಂದಿಗೆ ಊಟ ಮಾಡಲಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಶೀಘ್ರದಲ್ಲೇ ಎಸ್‌ಎಸ್‌ಎಲ್‌ಸಿ ರಿಸಲ್ಟ್
ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆಯ (2nd PUC Exam 2) ಫಲಿತಾಂಶ ಪ್ರಕಟವಾಗಿದೆ. ಶೇ. 45 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ (Passed). ಇದರೊಂದಿಗೆ ರಾಜ್ಯದಲ್ಲಿ ಈ ಬಾರಿ ಒಟ್ಟಾರೆ ದ್ವಿತೀಯ ಪಿಯುಸಿ ಫಲಿತಾಂಶ ಶೇ.92ಕ್ಕೆ ತಲುಪಿದೆ. ಎಸ್‌ಎಸ್‌ಎಲ್‌ಸಿ ಎರಡನೇ ಪರೀಕ್ಷೆಯ ಫಲಿತಾಂಶವೂ ಇದೇ ತಿಂಗಳ ಅಂತ್ಯದೊಳಗೆ ಪ್ರಕಟವಾಗಲಿದೆ. ಇನ್ನು, ಶಿಕ್ಷಕರ ಕೊರತೆಯಾಗದಂತೆ (Shortage of teachers) ಈಗಾಗಲೇ ಅತಿಥಿ ಶಿಕ್ಷಕರನ್ನು (Guest teachers) ನೇಮಕ ಮಾಡಿಕೊಳ್ಳಲು ಆದೇಶಿಸಲಾಗಿದೆ ಎಂದು ಮಧು ಬಂಗಾರಪ್ಪ ತಿಳಿಸಿದರು.
ಕಾರ್ಯಕ್ರಮದ ಸ್ಥಳ ಪರಿಶೀಲನೆ
ಜೂನ್ 1ರಂದು ನಡೆಯಲಿರುವ ಕಾರ್ಯಕ್ರಮದ ಸ್ಥಳವನ್ನು ಸಚಿವ ಮಧು ಬಂಗಾರಪ್ಪ ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿ (Deputy Commissioner) ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯಿತಿ ಸಿಇಒ (ZP CEO) ಎನ್.ಹೇಮಂತ್, ಜಿಲ್ಲಾ ರಕ್ಷಣಾಧಿಕಾರಿ (SP) ಬಿ.ನಿಖಿಲ್, ಹೆಚ್ಚುವರಿ ರಕ್ಷಣಾಧಿಕಾರಿ (ASP) ಅಭಿಷೇಕ್, ಪ್ರಮುಖರಾದ ರಮೇಶ್ ಹೆಗ್ಡೆ, ಕಲಗೋಡು ರತ್ನಾಕರ್ ಸೇರಿ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.
