ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 26 JUNE 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮೂರು ದಿನ ಸೊರಬ ಮತ್ತು ಶಿವಮೊಗ್ಗ ಪ್ರವಾಸ ಕೈಗೊಂಡಿದ್ದಾರೆ. ವಿವಿಧ ಕಾರ್ಯಕ್ರಮ ಮತ್ತು ಸಭೆಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಅವರ ಪ್ರವಾಸ ಪಟ್ಟಿಯಲ್ಲಿ ತಿಳಿಸಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಜೂ.27 ರಂದು ಬೆಳಗ್ಗೆ 5 ಗಂಟೆಗೆ ಬೆಂಗಳೂರಿನಿಂದ ಹೊರಟು ಬೆಳಗ್ಗೆ 10ಕ್ಕೆ ಸೊರಬ ತಲುಪಲಿದ್ದಾರೆ. ಬೆಳಗ್ಗೆ 10.30ಕ್ಕೆ ಸೊರಬದ ನಿಸರಾಣಿ ಸರ್ಕಲ್‌ನಲ್ಲಿ ಸಾಗರದಿಂದ ನಿಸರಾಣಿ ಮಾರ್ಗದ ಕೆಎಸ್‌ಆರ್‌ಟಿಸಿ ಬಸ್‌ಗೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 11.30ಕ್ಕೆ ತಲಕಾಲಕೊಪ್ಪದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಮಧ್ಯಾಹ್ನ 12.30ಕ್ಕೆ ದೂಗೂರು ಸರ್ಕಾರಿ ಪ್ರೌಢಶಾಲೆಗಳ ವಿವೇಕಾ ಶಾಲಾ ಕಟ್ಟಡ ಉದ್ಘಾಟನೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಸೊರಬ ತಾಲೂಕು ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಸೊರಬದಲ್ಲಿ ಸಚಿವರ ಕಚೇರಿಗೆ ಭೇಟಿ ನೀಡಲಿದ್ದಾರೆ. ರಾತ್ರಿ ಸೊರಬದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಜೂ.28ರಂದು ಬೆಳಗ್ಗೆ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾ ಮಟ್ಟದ ಜನತಾ ದರ್ಶನದಲ್ಲಿ ಸಚಿವ ಮಧು ಬಂಗಾರಪ್ಪ ಭಾಗವಹಿಸಲಿದ್ದಾರೆ. ರಾತ್ರಿ ಶಿವಮೊಗ್ಗದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಜೂ.29ರಂದು ಬೆಳಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಕೆಡಿಪಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ ಸೊರಬದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಇದನ್ನೂ ಓದಿ – KSRTC ಬಸ್ಸಿನಲ್ಲಿ ಬಾಯಾರಿಕೆ ಅಂತಾ ಮೇಲೆ ನೋಡಿದ ಯುವತಿಗೆ ಕಾದಿತ್ತು ಆಘಾತ