SHIVAMOGGA LIVE NEWS, 30 JANUARY 2024
ಶಿವಮೊಗ್ಗ : ವಿಮಾನ ನಿಲ್ದಾಣದ (Airport) ನಿರ್ವಹಣೆ ಕುರಿತು ಪ್ರಮುಖ ನಿರ್ಧಾರ ಕೈಗೊಳ್ಳಲಾಗುತ್ತಿದೆ. ಸದ್ಯ ಸಾಧಕ ಬಾಧಕದ ಕುರಿತು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು.
ಶಿವಮೊಗ್ಗ ಲೈವ್
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್, ವಿಮಾನ ನಿಲ್ದಾಣದ ನಿರ್ವಹಣೆಯನ್ನು ತಮಗೆ ವಹಿಸಬೇಕು ಎಂದು ವಿಮಾನಯಾನ ಪ್ರಾಧಿಕಾರ ಕೇಳಿದೆ. ಆದರೆ ಹಾಗೆ ಹಸ್ತಾಂತರ ಮಾಡಿದರೆ ಇಲ್ಲಿನ ಜಮೀನು ಕೂಡ ವಿಮಾನಯಾನ ಪ್ರಾಧಿಕಾರಕ್ಕೆ ಸೇರಲಿದೆ. ಹಾಗಾಗಿ ಲೀಸ್‌ಗೆ ನೀಡುವ ಕುರಿತು ಯೋಜಿಸಲಾಗುತ್ತಿದೆ. ಇದರಿಂದ ಈ ಜಮೀನು ರಾಜ್ಯ ಸರ್ಕಾರದ ಆಸ್ತಿಯಾಗಿ ಉಳಿಯಲಿದೆ ಎಂದರು.
ಕಲಬುರಗಿಯಲ್ಲಿ 1500 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ವಿಮಾನ ನಿಲ್ದಾಣವನ್ನು ವಿಮಾನಯಾನ ಪ್ರಾಧಿಕಾರಕ್ಕೆ ವಹಿಸಲಾಗಿದೆ. ಜಮೀನು ಕೂಡ ಪ್ರಾಧಿಕಾರದ ಹೆಸರಿಗೆ ಆಗಲಿದೆ. ಆದ್ದರಿಂದ ಶಿವಮೊಗ್ಗ ವಿಮಾನ ನಿಲ್ದಾಣದ ನಿರ್ವಹಣೆ ಕುರಿತು ಮಹತ್ವ ತೀರ್ಮಾನ ಕೈಗೊಳ್ಳಲಾಗುತ್ತಿದೆ. ಹಿಂದಿನ ಸರ್ಕಾರವು ಜಮೀನು ರಾಜ್ಯ ಸರ್ಕಾರದ ಬಳಿಯೇ ಉಳಿಯುವಂತೆ ನಿರ್ಣಯ ಕೈಗೊಂಡಿದೆ ಎಂದರು.
ಇನ್ನು, ಭೂಮಿ ಕಳೆದುಕೊಂಡವರಿಗೆ ವಸತಿ ಸಲುವಾಗಿ ಜಾಗ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಕೆಐಎಡಿಬಿಯಿಂದ 21 ಎಕರೆ ಜಾಗ ನೀಡುವ ಕುರಿತು ಸಕಾರಾತ್ಮಕ ನಿರ್ಣಯ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಇವತ್ತು ಏನೇನಾಯ್ತು? ಇಲ್ಲಿದೆ ಫಟಾಫಟ್ ನ್ಯೂಸ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200