ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಅಕ್ಟೋಬರ್ 2020
ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಶಿವಮೊಗ್ಗ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂದೆ ನೌಕರರು ಪ್ರತಿಭಟನೆ ನಡೆಸಿದರು.
ಪ್ರತಿದಿನ ಒಂದು ಗಂಟೆ ಪ್ರತಿಭಟನೆ
ಏಳು ದಿನದಿಂದ ಕೆಲಸ ಸ್ಥಗಿತಗೊಳಿಸಿ ನೌಕರರು ಧರಣಿ ನಡೆಸಿದ್ದರು. ಇನ್ಮುಂದೆ ಜಿಲ್ಲಾಧಿಕಾರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಹಾಗೂ ತಹಶೀಲ್ದಾರ್ ಕಛೇರಿ ಎದುರು ಪ್ರತಿದಿನ ಒಂದು ಗಂಟೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಇವತ್ತು ಮೊದಲ ದಿನ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡಸಿದರು.
ಈ ನೌಕರರ ಬೇಡಿಕೆಗಳೇನು?
ಸೇವಾ ಭದ್ರತೆ ಒದಗಿಸುವುದು, ಕೋವಿಡ್ ಸಂದರ್ಭ ಮೃತಪಟ್ಟ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಕುಟುಂಬಕ್ಕೆ 50 ಲಕ್ಷ ಪರಿಹಾರ, ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ, ಕೋವಿಡ್ ಆಪತ್ತು ಪ್ರೋತ್ಸಾಹಧನವನ್ನು ವಿಸ್ತರಿಸಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ.
ಮಿನಿಸ್ಟರ್, ಸಂಸದರು ಭೇಟಿ
ಸಚಿವ ಕೆ.ಎಸ್.ಈಶ್ವರಪ್ಪ ಮತ್ತ ಸಂಸದ ಬಿ.ವೈ.ರಾಘವೇಂದ್ರ ಅವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದರು. ಈ ವೇಳೆ ಪ್ರತಿಭಟನೆ ಕೈಬಿಟ್ಟು, ಕೋವಿಡ್ ಕರ್ತವ್ಯ ನಿರ್ವಹಿಸುವಂತೆ ಸಚಿವರು ಸಲಹೆ ನೀಡಿದರು. ಅಲ್ಲದೆ ನೌಕರರ ಸಮಸ್ಯೆಗಳನ್ನು ಶೀಘ್ರ ಪರಿಹರಿಸಲಾಗುತ್ತದೆ. ಇದಕ್ಕಾಗಿ ಸಂಬಂಧಿಸಿದ ಸಮಿತಿಯೊಂದಿಗೆ ಸಭೆ ನಡೆಸುತ್ತೇವೆ ಎಂದು ಭರವಸೆ ನೀಡಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422