ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JANUARY 2021
ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದ ಕಲ್ಲು ಕ್ವಾರೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರು ತಿಳಿಸಿದರು.
ಇವತ್ತು ಸ್ಥಳಕ್ಕೆ ಭೇಟಿ ನೀಡಿದ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ, ಇಲ್ಲಿ ಕಲ್ಲು ಗಣಿಗಾರಿಕೆ ಅಧಿಕೃತವಾಗಿ ನಡೆಯುತ್ತಿತ್ತೇ ಅಥವಾ ಅನಧಿಕೃತವಾಗಿತ್ತೆ ಎಂಬ ಬಗ್ಗೆ ತನಿಖೆ ನಡೆಸಲಾಗುವುದು. ಆದಷ್ಟು ಬೇಗನೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕಠಿಣ ಕ್ರಮ ಜರುಗಿಸಲಾಗುವುದು. ಘಟನೆಯನ್ನು ಎಲ್ಲಾ ಆಯಾಮಗಳಿಂದ ತನಿಖೆ ನಡೆಸಿ ಲೋಪದೋಷಗಳನ್ನು ಪತ್ತೆ ಹಚ್ಚಲಾಗುವುದು. ಗಣಿಗಾರಿಕೆಗೆ ಸ್ಫೋಟಕ ಎಲ್ಲಿಂದ ಬಂತು, ಇದಕ್ಕೆ ಪರವಾನಿಗೆ ಇತ್ತೆ, ಸ್ಫೋಟಕ ಸಾಗಣೆಯಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಪಾಲಿಸಲಾಗಿದೆಯೇ ಎಂಬ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.
ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಇಂತಹ ದುರ್ಘಟನೆಗಳು ಆಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗುವುದು. ರಾಜ್ಯದ ಅಭಿವೃದ್ಧಿಗೆ ಜಲ್ಲಿ ಕಲ್ಲುಗಳ ಪೂರೈಕೆ ಅನಿವಾರ್ಯ. ಆದರೆ ಪರವಾನಿಗೆ ಇಲ್ಲದೆ ಗಣಿಗಾರಿಕೆ ನಡೆಸಲು ಅವಕಾಶ ನೀಡಲಾಗುವುದಿಲ್ಲ. ಶಿವಮೊಗ್ಗ ಜಿಲ್ಲೆಯಲ್ಲಿ ಅನಧಿಕೃತ ಗಣಿಗಾರಿಕೆ ವಿರುದ್ಧ ಕೈಗೊಂಡಿರುವ ಕ್ರಮಗಳ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು.
5 ಮಂದಿ ದುರ್ಮರಣ
ಗುರುವಾರ ರಾತ್ರಿ ಸಂಭವಿಸಿದ ಸ್ಫೋಟದಲ್ಲಿ 5 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಮುಖ್ಯಮಂತ್ರಿಯವರು ಮೃತರ ಕುಟುಂಬಗಳಿಗೆ ತಲಾ ಐದು ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಇನ್ನುಳಿದಂತೆ ಕಾರ್ಮಿಕ ಇಲಾಖೆ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಮೃತರ ಕುಟುಂಬಗಳಿಗೆ ಹೆಚ್ಚುವರಿ ಪರಿಹಾರ ಹಾಗೂ ಸಹಾಯ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200